ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ದೇವೇಗೌಡ ಪ್ರಚಾರ !

ಇದೇ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಪರ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ.
ಹೆಚ್. ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಹೆಚ್. ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಇದೇ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಪರ ಜೆಡಿಎಸ್ ವರಿಷ್ಠ ಎಚ್.  ಡಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಉಪ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡಿದ್ದು, ಶಿವಮೊಗ್ಗ ಮಂಡ್ಯ ಹಾಗೂ ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಿದ್ದಾರೆ.

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸೋಮವಾರ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ. ಎಸ್. ಉಗ್ರಪ್ಪ ಪರವಾಗಿ ಪ್ರಚಾರ ನಡೆಸಲಿದ್ದರೆ, ಬುಧವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ.

ಬಳ್ಳಾರಿ ಹಾಗೂ ಶಿವಮೊಗ್ಗದಲ್ಲಿ ದೇವೇಗೌಡರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪ್ರಚಾರ ನಡೆಸಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಶಿವಮೊಗ್ಗದಲ್ಲಿ  ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ವಿರುದ್ಧ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ.
ಈ ಮಧ್ಯೆ  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇನ್ನೂ ಮೂರು ದಿನ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಪ್ರಚಾರ ನಡೆಸಲಿದ್ದಾರೆ.ಉಪಚುನಾವಣೆ ಗೆಲಲ್ಲು ಪಣತೊಟ್ಟಿರುವ ಕಾಂಗ್ರೆಸ್  10 ಸಚಿವರು  ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಬಳ್ಳಾರಿಗೆ ನಿಯೋಜಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com