ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ರೈತರ ಸಾಲ ಮನ್ನಾ ಮಾಡದ ನಿಮ್ಮ ಅಸಾಮರ್ಥ್ಯಕ್ಕೆ ಪ್ರಧಾನಿ ಮೋದಿ, ಕೇಂದ್ರವನ್ನು ದೂಷಿಸಬೇಡಿ: ಬಿಎಸ್'ವೈ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಲು ಸಾಧ್ಯವಾಗದ ನಿಮ್ಮ ಅಸಾಮರ್ಥ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಲು ಸಾಧ್ಯವಾಗದ ನಿಮ್ಮ ಅಸಾಮರ್ಥ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಸಾಲ ಮನ್ನಾ ಘೋಷಣೆ ಇನ್ನೂ ಪೇಪರ್ ಗಳಲ್ಲಿಯೇ ಇದೆ. ಸಹಕಾರಿ ಬ್ಯಾಂಕ್ ಗಳಿಂದ ರೈತರ ಒಂದು ನಯಾ ಪೈಸೆ ಕೂಡ ಸಾಲ ಮನ್ನವಾಗಿಲ್ಲ ಎಂದು ಹೇಳಿದ್ದಾರೆ. 
ರೈತರಿಗೆ ಹಣ ನೀಡಿದ ಬ್ಯಾಂಕ್ ಗಳು ಮುಚ್ಚುವ ಹಂತದಲ್ಲಿವೆ. ಮುಖ್ಯಮಂತ್ರಿಗಳು ಸಾಲ ಮನ್ನಾ ಮಾಡುವ ಘೋಷಣೆ ಮಾಡಿ ಹಲವು ತಿಂಗಳೂಗಳೇ ಕಳೆದಿವೆ. ಆದರೆ, ಯಾವುದು ಆಗಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲಲ್ಿ ರೈತರು ಪಡೆದ ಸಾಲಕ್ಕೆ ಸಂಬಂಧಿಸಿದಂತೆ ಮಾಹಿತಿಗಳು ಒದಗಿಸುತ್ತಿಲ್ಲ ಎಂಬ ಕಾರಣಕ್ಕೆ ಕುಮಾರಸ್ವಾಮಿಯವರು ಪ್ರಧಾನಮಂತ್ರಿಗಳನ್ನು ದೂಷಿಸುತ್ತಾರೆ. ಪ್ರಧಾನಿ ಮೋದಿ ಏಕೆ ಸಾಲ ಮನ್ನಾ ಮಾಡುವುದನ್ನು ತಡೆಯುತ್ತಾರೆ? ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. 
ಸಾಮಾನ್ಯ ಕೂಲಿ ಕಾರ್ಮಿಕ ಕೂಡ ಇಂತಹ ಮಾಹಿತಿ ಕೇಳಿ ಬ್ಯಾಂಕ್'ಗೆ ಪತ್ರ ಬರೆದಾಗ ಅದಕ್ಕೆ ಬ್ಯಾಂಕ್ ಗಳು ಮಾಹಿತಿಗಳನ್ನು ನೀಡುತ್ತವೆ. ಇದು ಸಾಮಾನ್ಯ ಜ್ಞಾನ. ಇದು ಮಾಹಿತಿ ಅಥವಾ ಅಡಚಣೆಗೆ ಸಂಬಂಧಿಸಿದ್ದಲ್ಲ. ಘೋಷಿತ ಸಾಲ ಮನ್ನಾದ ಮೇಲೆ ಹಣದ ಕೊರತೆ ಎದುರಾಗಿದೆ ಎಂದು ತಿಳಿಸಿದ್ದಾರೆ. 
ಬಳಿಕ ಮಾಜಿ ಶ್ರೀರಾಮುಲು ಹಾಗೂ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರಿಗೆ, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಮಮಾನಿಸುತ್ತಿರುವುದಕ್ಕೆ ತೀವ್ರವಾಗಿ ಕಿಡಿಕಾರಿದ ಅವರು, ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡಿರುವಂತೆ ಕಾಣುತ್ತಿದೆ. ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಾಯ್ದೆ 370 ಜೆ ಪ್ರಕಾರ ಸ್ಥಳೀಯ ಪ್ರದೇಶಗಳಿಗೆ ವಿಶೇಷ ಬಜೆಟ್ ಘೋಷಣೆ ಮಾಡುವ ಅವಕಾಶವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡಿಲ್ಲ ಎಂದಿದ್ದಾರೆ. 
ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಗಳು ಗೈರು ಹಾಜರಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಹಾಜರಾಗಿಲ್ಲ. ಈ ಮೂಲಕ ವಾಲ್ಮೀಕಿ ಸಮುದಾಯಕ್ಕೆ ಅವಮಾನಿಸಿದ್ದಾರೆ. ಕೂಡಲೇ ಇಬ್ಬರೂ ಕ್ಷಮೆಯಾಚಿಸಬೇಕೆಂದಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com