ಉಪಚುನಾವಣೆ: ಮಂಡ್ಯದಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳಲು ಅವಕಾಶ ?

ಮಂಡ್ಯ ಲೋಕಸಭಾ ಉಪ ಚುನಾವಣೆಯ ಕಣ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಂತಿರುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟದಿಂದಾಗಿ ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿಗೆ ಅವಕಾಶ ದೊರೆಯುವ ಸಾಧ್ಯತೆ ಕಂಡುಬರುತ್ತಿದೆ.
ಎಲ್. ಆರ್. ಶಿವರಾಮೇಗೌಡ , ಡಾ. ಸಿದ್ದರಾಮಯ್ಯ
ಎಲ್. ಆರ್. ಶಿವರಾಮೇಗೌಡ , ಡಾ. ಸಿದ್ದರಾಮಯ್ಯ
Updated on: 

ಮಂಡ್ಯ :   ಸಕ್ಕರೆ ನಾಡು ಮಂಡ್ಯ ಲೋಕಸಭಾ ಉಪ ಚುನಾವಣೆಯ ಕಣ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಂತಿರುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್  ಪಕ್ಷಗಳ  ಕಾರ್ಯಕರ್ತರ ನಡುವಿನ ಕಿತ್ತಾಟದಿಂದಾಗಿ  ಒಕ್ಕಲಿಗ ಪ್ರಾಬಲ್ಯದ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳಲು ಬಿಜೆಪಿಗೆ ಅವಕಾಶ ದೊರೆಯುವ ಸಾಧ್ಯತೆ ಕಂಡುಬರುತ್ತಿದೆ.

ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು  ವಿಧಾನಸಭಾ ಕ್ಷೇತ್ರದಲ್ಲಿಯೂ ಜೆಡಿಎಸ್ ಪಕ್ಷದ ಶಾಸಕರೇ ಇದ್ದು,  ಪಕ್ಷ ಉತ್ತಮ ಸ್ಥಿತಿಯಲ್ಲಿದೆ. ಆದರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್  ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.  ಹೆಚ್. ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ಒಂದಾಗಿದ್ದರೂ ತಳಮಟ್ಟದ ಕಾರ್ಯಕರ್ತರಲ್ಲಿ ಹೊಂದಾಣಿಕೆ ಕಂಡುಬರುತ್ತಿಲ್ಲ.

ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ  ಜಾತಿ ಸಮೀಕರಣ ಹಾಗೂ ರಾಜಕೀಯ ಸ್ಥಿತಿಗತಿಗಳ ಪ್ರಕಾರ ಜೆಡಿಎಸ್ ಅಭ್ಯರ್ಥಿ ಎಲ್ . ಆರ್. ಶಿವರಾಮೇಗೌಡ  ಬಹುತೇಕ ಗೆಲುವು ಸಾಧಿಸುವುದು ನಿಶ್ಚಿತ . ಹಿಂದಿನ ಆರು ಚುನಾವಣೆಗಳಲ್ಲಿ ಕಾಂಗ್ರೆಸ್ ನಾಲ್ಕು ಬಾರಿ ಗೆಲುವು ಸಾಧಿಸಿದೆ.

 ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ನಡುವಿನ  ಒಳ ಜಗಳ ಅರಿತೇ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ, ಸಾಲಮನ್ನಾ ಘೋಷಣೆ ಹಾಗೂ ಬಿಜೆಪಿ ಮಂಡ್ಯ  ವಿರೋಧಿ ಎಂಬಂತೆ ಬಿಂಬಿಸುವ ಮೂಲಕ ಭಾವಾನಾತ್ಮಕವಾಗಿ ಜನರನ್ನು ಸೆಳೆಯುವ ನಾಟಕವಾಡುತ್ತಿದ್ದಾರೆ.

ಸಾಲಮನ್ನಾದಲ್ಲಿ ವಿಳಂಬ ಹಾಗೂ ಅನೇಕ ಷರತ್ತು ವಿಧಿಸಿರುವುದಕ್ಕೆ ಮಂಡ್ಯ ಜನರು ಅಸಮಾಧಾನಗೊಂಡಿದ್ದಾರೆ. ಕೆಲವರು ಶಿವರಾಮೇಗೌಡ ಪರ ಉತ್ತಮ ಅಭಿಪ್ರಾಯ ಹೊಂದಿಲ್ಲ. ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನ ವಿಚಾರದಲ್ಲೂ ಕೂಡಾ ಸರ್ಕಾರ ಮೌನ ವಹಿಸಿದೆ.ಈ ಹಿಂದಿನ ಚುನಾವಣೆಯಲ್ಲಿ ರಮ್ಯಾ ಅವರನ್ನು ಬೆಂಬಲಿಸಿದ ಅಹಿಂದ ನಾಯಕರು ಅಡ್ಡದಾರಿ ಹಿಡಿದಿದ್ದಾರೆ.

ಇವೆಲ್ಲಾ ಅಂಶಗಳು ಬಿಜೆಪಿ ರಾಜಕೀಯ ನೆಲೆ ವಿಸ್ತರಿಸಲು ಅವಕಾಶ ದೊರೆಯಬಹುದಾಗಿದೆ. ಮಂಡ್ಯ, ಶ್ರೀರಂಗಪಟ್ಟಣ ಹಾಗೂ ಮತ್ತಿತರ ಕಡೆಗಳಲ್ಲಿ ಉತ್ತಮ ಮತ ದೊರೆಯಬಹುದೆಂಬ ವಿಶ್ವಾಸದಲ್ಲಿ ಕೇಸರಿ ನಾಯಕರಿದ್ದಾರೆ. 
ಅನೇಕ ಕಾಂಗ್ರೆಸ್ ನಾಯಕರು ಬಿಜೆಪಿ ಅಭ್ಯರ್ಥಿ ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಮಾಜಿ ಸಚಿವ ಎನ್ ಚಲುವನಾರಾಯಣಸ್ವಾಮಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿ ಲಕ್ಷ್ಮಿ ಅಶ್ವಿನ್ ಗೌಡ ಮತ್ತಿತರರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂಪರ್ಕಿಸಿರುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com