ಕಾಂಗ್ರೆಸ್ ಬೆಂಬಲವಿಲ್ಲದೆ ಪ್ರಾದೇಶಿಕ ಪಕ್ಷಗಳು ಯಾರನ್ನೋ ಪ್ರಧಾನಿ ಮಾಡಲು ಸಾಧ್ಯವಿಲ್ಲ- ದೇವೇಗೌಡ

ಕಾಂಗ್ರೆಸ್ ಪಕ್ಷದ ಬೆಂಬಲವಿಲ್ಲದೆ ಪ್ರಾದೇಶಿಕ ಪಕ್ಷಗಳು ಯೊರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.
ಹೆಚ್. ಡಿ. ದೇವೇಗೌಡ, ರಾಹುಲ್ ಗಾಂಧಿ
ಹೆಚ್. ಡಿ. ದೇವೇಗೌಡ, ರಾಹುಲ್ ಗಾಂಧಿ

ಬಳ್ಳಾರಿ:  ಕಾಂಗ್ರೆಸ್ ಪಕ್ಷದ ಬೆಂಬಲವಿಲ್ಲದೆ ಪ್ರಾದೇಶಿಕ ಪಕ್ಷಗಳು ಯೊರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು  ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ,  ರಾಹುಲ್ ಗಾಂಧಿ ಅವರನ್ನು ಬಿಟ್ಟು 2019ರ ಲೋಕಸಭಾ ಚುನಾವಣೆ ನಂತರ ಪ್ರಾದೇಶಿಕ ಪಕ್ಷಗಳು ಪ್ರಧಾನಿ ಅಭ್ಯರ್ಥಿ ಆಯ್ಕೆ ಮಾಡಲು ಸಾಧ್ಯವಿಲ್ಲ. ಆದರೆ, ಕಾಂಗ್ರೆಸ್ ನಿರ್ಧಾರ ಅಂತಿಮವಾಗಲಿದೆ ಎಂದರು.

 2019ರ ಲೋಕಸಭಾ ಚುನಾವಣೆ ನಂತರ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಹೇಳಿದರು.

ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಕಾಂಗ್ರೆಸ್ ಘೋಷಿಸಿಲ್ಲ ಎಂದು ಮಾಜಿ ಸಚಿವ ಪಿ. ಚಿದಂಬರಂ ಹೇಳಿಕೆಯ  ಒಂದು ವಾರಗಳ ನಂತರ ದೇವೇಗೌಡ ಈ ಹೇಳಿಕೆ ನೀಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ನಾಯಕತ್ವದಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗುವಂತೆ  ದೇವೇಗೌಡ ಇತ್ತೀಚಿಗೆ ಹೇಳಿಕೆ ನೀಡಿದ್ದರು. ತಮ್ಮ ಸಲಹೆಯನ್ನು ತಿರಸ್ಕರಿಸಿದ್ದರೆ ಮಹಾಮೈತ್ರಿಗೆ ದೊಡ್ಡ ಪ್ರಮಾಣದ ಹಾನಿಯಾಗಲಿದೆ ಎಂದು ಅವರು ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com