

ಬಳ್ಳಾರಿ: ಸಮ್ಮಿಶ್ರ ಸರ್ಕಾರ ಉಪ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಹೇಳಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಕೇಸರಿ ಪಕ್ಷ ಇಲ್ಲದಂತೆ ಮಾಡಲಾಗುವುದು ಎಂದು ಹೇಳಿದ್ದಾರೆ.ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿ ಗೆದ್ದರೇ ಇದು ಮುಂಬರುವ ಲೋಕಸಭೆ ಕ್ಷೇತ್ರಕ್ಕೆ ಪಾಸಿಟಿವ್ ಸಂಕೇತ. ನಾವು ಇಬ್ಬರು ಒಪ್ಪುವಂತ ಕಾಮನ್ ಕ್ಯಾಂಡಿಡೇಟ್ ಹಾಕಿದ್ದೇವೆ.ಉಗ್ರಪ್ಪ ಪ್ರಾಮಾಣಿಕ ಅಭ್ಯರ್ಥಿ, ಅವರು ಉತ್ತಮ ನಾಯಕ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಹಗಲು ರಾತ್ರಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.ಸದ್ಯದಲ್ಲೇ ದೇಶದ ಆರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತಿದೆ. ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಜಾತ್ಯಾತೀತ ಶಕ್ತಿಗಳೆಲ್ಲಾ ಒಂದಾಗಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ನಡೆಸುವುದಾಗಿ ಹೇಳಿದ್ದಾರೆ, ಇದೇ ಕಾರಣಕ್ಕೆ ನಾನು ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಪ್ರಚಾರ ನಡೆಸಿದ್ದೇನೆ. ಒಂದು ವೇಳೆ ಸಿದ್ದರಾಮಯ್ಯ ಅವರು ಬಯಸಿದರೇ ನಾನು ಜಮಖಂಡಿಗೆ ಹೋಗಿ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದರು.ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟಾರೆ 13 ಉಪ ಚುನಾವಣೆಗಳು ನಡೆದಿದೆ. ಈ ಪೈಕಿ 12ರಲ್ಲಿ ಬಿಜೆಪಿಯೇತರ ಪಕ್ಷ ಗೆದಿದ್ದು, ಒಂದರಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ನಾಯಕತ್ವದಲ್ಲಿ ರಾಷ್ಟ್ರದಲ್ಲಿ ಮೋದಿಯವರ ಬಿಜೆಪಿ ಸರಕಾರವನ್ನು 2019ರಲ್ಲಿ ತೆಗೆಯಲೇಬೇಕೆಂದು ಗುರಿಯಿಂದ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ದಕ್ಷಿಣ ಬಾಗಿಲು ಮುಚ್ಚಿಸುವ ಕೆಲಸವನ್ನು ನಾವು ಮಾಡುತ್ತೇವೆ. ಪ್ರಾದೇಶಿಕ ಪಕ್ಷಗಳು ಒಂದುಗೂಡಿ, ದೇಶದಲ್ಲಿ ಜಾತ್ಯತೀತ ಶಕ್ತಿಗಳು ಅಧಿಕಾರಕ್ಕೆ ಬರಬೇಕೆಂದು ಕಾಂಗ್ರೆಸ್ ಜತೆಗೂಡಿ ಕೆಲಸ ಮಾಡುತ್ತೇವೆ, ಅದರ ಮೊದಲ ಭಾಗವೇ ರಾಜ್ಯದಲ್ಲಿ ನಡೆಯುತ್ತಿರುವ ಮರು ಚುನಾವಣೆಯಾಗಿದೆ ಎಂದರು. 1996ರಲ್ಲಿ ಆಂಧ್ರದ ಚಂದ್ರಬಾಬು ನಾಯ್ಡು ಅವರು ದೇಶದ 13 ಪಕ್ಷಗಳನ್ನು ಒಟ್ಟುಗೂಡಿಸಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸಮ್ಮಿಶ್ರ ಸರಕಾರ ಅಕಾರ ಸ್ವೀಕರಿಸುವ ಸಂದರ್ಭರ್ದಲ್ಲೂ ರಾಜ್ಯಕ್ಕೆ ಆಗಮಿಸಿದ್ದರು ಎಂದರು. ವಾಲ್ಮೀಕಿ ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಾಜದ ಮುಖಂಡರು ಮತ್ತು ಸ್ವಾಮೀಜಿಯವರ ಸಮ್ಮುಖದಲ್ಲಿಯೇ ಒಂದು ತಿಂಗಳ ಹಿಂದೆ ಲಂಡನ್ ಕಾರ್ಯಕ್ರಮ ನಿಗದಿಯಾಗಿತ್ತು. ಕಾರ್ಯಕ್ರಮಕ್ಕೆ ಬರುವುದಕ್ಕೆ ಆಗುವುದಿಲ್ಲ ಎಂದು ಹೇಳಿ, ಹೋಗಿದ್ದೇನೆ, ಇದು ಬಿಜೆಪಿಯವರಿಗೂ ಗೊತ್ತು. ಒಂದು ದಿನ ಸರಕಾರದಿಂದಲೇ ವಾಲ್ಮೀಕಿ ಪ್ರಶಸ್ತಿಯನ್ನು ಸ್ವೀಕರಿಸುತ್ತೇನೆ ಎಂದರು.