ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: 'ಕೈ' ಮೇಲುಗೈ, ಬಹುತೇಕ ಅತಂತ್ರ

ರಾಜ್ಯದ ಮೂರು ಮಹಾನಗರ ಪಾಲಿಕೆ ಸೇರಿದಂತೆ 22 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ.....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆ ಸೇರಿದಂತೆ 22 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಆದರೆ ಬಹುತೇಕ ಕಡೆ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ - ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
ಒಟ್ಟಾರೆ 2527 ವಾರ್ಡ್​ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 946, ಬಿಜೆಪಿ 875, ಜೆಡಿಎಸ್​ 345, ಬಿಎಸ್ಪಿ 12, ಎಸ್ ಡಿಪಿಐ 17, ಕೆಪಿಜೆಪಿ 10 ಹಾಗೂ ಪಕ್ಷೇತರರು 315 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ.
29 ನಗರಸಭೆಗಳ ಪೈಕಿ ಕಾಂಗ್ರೆಸ್ 10 ನಗರಸಭೆಯಲ್ಲಿ ಬಿಜೆಪಿ 5 ನಗರಸಭೆಯಲ್ಲಿ ಹಾಗೂ ಜೆಡಿಎಸ್ 3 ನಗರಸಭೆಗಳಲ್ಲಿ ಸ್ಪಷ್ಟ ಬಹುಮತ ಪಡೆದಿದ್ದು, 11 ನಗರಸಭೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
20 ಪಟ್ಟಣ ಪಂಚಾಯ್ತಿಗಳ ಪೈಕಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಏಳು ಕಡೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಎರಡರಲ್ಲಿ ಜೆಡಿಎಸ್ ಹಾಗೂ ನಾಲ್ಕು ಕಡೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಒಟ್ಟಾರೆ 31 ಕಡೆ ಕಾಂಗ್ರೆಸ್, 30 ಕಡೆ ಬಿಜೆಪಿ ಹಾಗೂ 8 ಕಡೆ ಜೆಡಿಎಸ್ ಅಧಿಕಾರ ಹಿಡಿದಿದ್ದು, 31 ಕಡೆ ಅತಂತ್ರ ಸ್ಥಿತಿ ನಿರ್ಮಾಣವಾಗಿರುವುದರಿಂದ ಸ್ಥಳೀಯ ಸಂಸ್ಥೆಗಳಲ್ಲೂ ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಅನಿವಾರ್ಯವಾಗಿದೆ.
ಇನ್ನು ಮೂರು ಮಹಾನಗರ ಪಾಲಿಕೆಗಳ ಪೈಕಿ ಶಿವಮೊಗದ್ದಲ್ಲಿ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ಸಿಯಾಗಿದ್ದು, ತುಮಕೂರು ಮತ್ತು ಮೈಸೂರು ಮಹಾನಗರ ಪಾಲಿಕೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com