ಸ್ಥಳೀಯ ಸಂಸ್ಥೆ ಫಲಿತಾಂಶ ಲೋಕಸಭೆ ಚುನಾವಣೆಗೆ ಟ್ರೆಂಡ್ ಸೆಟ್ಟರ್ ಅಲ್ಲ: ಯಡಿಯೂರಪ್ಪ

ನಿನ್ನೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಟ್ರೆಂಡ್ ಶೆಟ್ಟರ್ ಅಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ...
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ನಿನ್ನೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಗೆ ಟ್ರೆಂಡ್ ಶೆಟ್ಟರ್ ಅಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಹೀಗಿದ್ದರೂ ಕಾಂಗ್ರೆಸ್ ಪ್ರಬಲ ಸ್ಥಾನವಾಗಿರುವ  ಹಳೇ ಮೈಸೂರು ಭಾಗದಲ್ಲಿ ಹಲವು ಕಡೆ ಬಿಜೆಪಿ ಗೆಲುವಿನ ನಗೆ ಬೀರಿದೆ, ಆದರೆ ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಟ್ರೆಂಡ್ ಸೆಟ್ಟರ್ ಅಲ್ಲ ಎಂದು ಬಿಜೆಪಿ ಪ್ರತಿಪಾದಿಸಿದೆ.
ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳು ವಿಭಿನ್ನ ಎಂದು ಯಡಿಯೂರಪ್ಪ ಹೇಳಿದ್ದಾರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಸುಮಾರು 22 ರಿಂದ 25 ಸ್ಥಾನ ಗೆಲ್ಲುವುದಾಗಿ ತಿಳಿಸಿದ್ದಾರೆ. 
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಬಗ್ಗೆ ಈಗಾಗಲೇ ಜನ ನಿರ್ಧರಿಸಿದ್ದಾರೆ, ಈ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ,  ಹಲವು ಭಾಗಗಳಲ್ಲಿ ಹೆಚ್ಚಿನ ಸ್ಥಾನ ಪಡೆದಿದ್ದೇವೆ, ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ, ಹಣ ಮತ್ತು ಅಧಿಕಾರದ ದುರುಪಯೋಗದಿಂದ 2 ಪಕ್ಷಗಳು ಗೆಲುವು ಸಾಧಿಸಿವೆ ಎಂದು  ಯಡಿಯಬರಪ್ಪ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com