ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದೆ, ಕಾಂಗ್ರೆಸ್ ರಾಜ್ಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿದೆ: ಬಿಜೆಪಿ

ಇತ್ತೀಚೆಗೆ ಹೊರಬಿದ್ದ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಜನ ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ...
ಸಿಎಂ ಕುಮಾರ ಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ಡಿ,ಕೆ ಶಿವಕುಮಾರ್
ಸಿಎಂ ಕುಮಾರ ಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ಡಿ,ಕೆ ಶಿವಕುಮಾರ್
ಬೆಂಗಳೂರು: ಇತ್ತೀಚೆಗೆ ಹೊರಬಿದ್ದ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಜನ ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 
2007ರಿಂದ ಇಲ್ಲಿಯವರೆಗೂ ನಡೆದ ಚುನಾವಣೆಗಳನ್ನು ಗಮನಿಸಿದರೇ  ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿವೆ ಎಂದು ಹೇಳಿದ್ದಾರೆ. 
2007 ರಲ್ಲಿ ಬಿಜೆಪಿ 5,004 ರಲ್ಲಿ 1,180 ಸೀಟುಗಳಲ್ಲಿ ಗೆದ್ದಿತ್ತು,  ಈ ವರ್ಷದ ಮೊದಲ ಹಂತದ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬಂದಿದ್ದು, ಪಕ್ಷ ಮತ್ತಷ್ಟು ಸುಧಾರಿಸಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಕಡಿಮೆ ಸೀಟು ಬಂದಿದೆ,.ಜೆಡಿಎಸ್ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದೆ,. ಕಾಂಗ್ರೆಸ್ ತನ್ನ ಹಿಡಿತ ಕೊಳ್ಳುತ್ತಿದೆ, ಸಮ್ಮಿಶ್ರ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.
ಕಳೆದ ವರ್ಷಗಳಿಗೆ ಹೋಲಿಸಿದರೇ ಈ ವರ್ಷ ಬಿಜೆಪಿ ಸಾಧನೆ ಗಮನಾರ್ಹವಾಗಿ ಹೆಚ್ಚಿದೆ. 2007 ರಿಂದ ಬಿಜೆಪಿ, ಸಂಸದರು, ಶಾಸಕರ ಆಯ್ಕೆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ 22 ಸೀಟುಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.
ಜನ ಸಮ್ಮಿಶ್ರ ಸರ್ಕಾರದ ಮೇಲೆ ವಿಶ್ವಾಸವಿಟ್ಟಿದ್ದಾರೆ, ಹೀಗಾಗಿ ಜನ ನಮ್ಮನ್ನು ಹರಸಿದ್ದಾರೆ ಎಂದು ಸಿಎಂ ಕುಮಾರ ಸ್ವಾಮಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com