ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ದಿಢೀರ್ ವಾಪಸ್: ಕುಮಾರಸ್ವಾಮಿ ವ್ಯಂಗ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ರಾಜಧಾನಿ ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಮುಖ್ಯಮಂತ್ರಿ...
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Updated on: 
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ರಾಜಧಾನಿ ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ವ್ಯಂಗ್ಯವಾಡಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಬದಲಿಸಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲು ತುರ್ತಾಗಿ ಬಂದಿದ್ದಾರೆಂದು ಹೇಳಿದ್ದಾರೆ. 
ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ನಿಮಗೇ ಗೊತ್ತಿದೆ. ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಲೇ ಇವೆ ಎಂದು ತಿಳಿಸಿದ್ದಾರೆ. 
ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. ಕಾರ್ಯಕಾರಣಿ ಸಭೆ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ರಾಜಧಾನಿ ದೆಹಲಿಗೆ ಭೇಟಿ ನಿನ್ನೆ ಸಂಜೆಯಷ್ಟೇ ತೆರಳಿದ್ದರು. 
ದೆಹಲಿಗೆ ತೆರಳಿದ 12 ತಾಸಿನಲ್ಲಿಯೇ ಯಡಿಯೂರಪ್ಪ ಅವರು ಇದೀಗ ಬೆಂಗಳೂರಿಗೆ ಹಠಾತ್ ವಾಪಸ್ಸಾಗಿರುವುದು ಹಲವು ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com