ಮೈತ್ರಿ ಸರ್ಕಾರಕ್ಕೆ 'ಕೈ' ಕೊಟ್ಟು, ಬಿಜೆಪಿ ಸೇರಲಿರುವ ಸಂಭಾವ್ಯ 14 ಕಾಂಗ್ರೆಸ್ ಶಾಸಕರ ಪಟ್ಟಿ ಇಲ್ಲಿದೆ!
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು 14 ಶಾಸಕರೊಂದಿಗೆ ಬಿಜೆಪಿ ಸೇರುವ ಮೂಲಕ ಮೈತ್ರಿ ಸರ್ಕಾರಕ್ಕೆ ಜಾರಕಿಹೊಳಿ ಬ್ರದರ್ಸ್ ಶಾಕ್ ಕೊಡುವ ಸಾಧ್ಯತೆಗಳಿವೆ...
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು 14 ಶಾಸಕರೊಂದಿಗೆ ಬಿಜೆಪಿ ಸೇರುವ ಮೂಲಕ ಮೈತ್ರಿ ಸರ್ಕಾರಕ್ಕೆ ಜಾರಕಿಹೊಳಿ ಬ್ರದರ್ಸ್ ಶಾಕ್ ಕೊಡುವ ಸಾಧ್ಯತೆಗಳಿವೆ.
ಇತ್ತೀಚಿಗಿನ ರಾಜಕೀಯ ಬೆಳವಣಿಗೆ ಹಾಗೂ ಸಚಿವ ಸ್ಥಾನ ಸಿಗದೇ ಬೇಸರಗೊಂಡಿರುವ ಸತೀಶ್ ಜಾರಕಿಹೊಳಿ ಅವರು ಪಕ್ಷೇತ್ರರ ಶಾಸಕ ಸೇರಿ ಕಾಂಗ್ರೆಸ್ ನ ಶಾಸಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.