ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆ: ಸುನೀಲ್ ಪಾಟೀಲ್ ಗೆಲವು

ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್‌ನ ಸುನೀಲಗೌಡ ಪಾಟೀಲ ...
ಸುನೀಲ್ ಗೌಡ ಪಾಟೀಲ್
ಸುನೀಲ್ ಗೌಡ ಪಾಟೀಲ್
Updated on
ವಿಜಯಪುರ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್‌ನ ಸುನೀಲಗೌಡ ಪಾಟೀಲ ಭರ್ಜರಿ ಜಯ ಸಾಧಿಸಿದ್ದಾರೆ.  
ಬಿಜೆಪಿ ಅಭ್ಯರ್ಥಿ ಗೂಳಪ್ಪ ಶಟಗಾರ ಅವರನ್ನು 1975 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಒಟ್ಟು 7 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಬೆಂಬಲ ನೀಡಿತ್ತು.
ಬಸನಗೌಡ ಪಾಟೀಲ ಯತ್ನಾಳ ರಾಜೀನಾಮೆಯಿಂದ ತೆರವಾಗಿದ್ದ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ  ಸೆಪ್ಟಂಬರ್ 6 ರಂದು ಚುನಾವಣೆ ನಡೆದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com