ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಎಂದಿಗೂ ನನಸಾಗದು: ಸಿಎಂ ಕುಮಾರಸ್ವಾಮಿ

ಬಿಜೆಪಿ ನಾಯಕರಿಗೆ ನಾಡಿನ ಸಮಸ್ಯೆಗಿಂತ ಹೆಚ್ಚಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಮುಖ್ಯ ಕೆಲಸವಾಗಿದೆ, ಆದರೆ...
ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
Updated on
ಮೈಸೂರು/ಮಂಡ್ಯ: ಬಿಜೆಪಿ ನಾಯಕರಿಗೆ ನಾಡಿನ ಸಮಸ್ಯೆಗಿಂತ ಹೆಚ್ಚಾಗಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಮುಖ್ಯ ಕೆಲಸವಾಗಿದೆ, ಆದರೆ ಬಿಜೆಪಿಯವರ ಕನಸು ಎಂದಿಗೂ ನನಸಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಕೊಡಗಿನಲ್ಲಿ ಅತಿಯಾದ ಮಳೆಯಿಂದ ಪ್ರವಾಹ ಉಂಟಾಗಿ ಜನ ಜೀವನ ಅಯೋಮಯವಾಗಿದೆ, 86 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಮಾತ್ರ ಪಿತೂರಿ ಮಾಡುವುದರಲ್ಲಿ ನಿರತವಾಗಿದೆ, ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಪ್ರಯತ್ನಕ್ಕೆ ನಾನು ಯಾವುದೇ ಸ್ಟ್ಯಾಟರ್ಜಿ ಮಾಡುವುದಿಲ್ಲ. ರಾಜ್ಯದ ಕೆಲಸ ಮಾಡುವ ಕಡೆ ಮಾತ್ರ ಗಮನ ಹರಿಸುತ್ತೇನೆ ಎಂದು ಹೇಳಿದರು.  ಜಾರಕಿಹೊಳಿ ಸಹೋದರರು ನನ್ನ ಜತೆ ನಿತ್ಯ ಸಂಪರ್ಕದಲ್ಲಿದ್ದಾರೆ. ಆಡಳಿತ ವಿಚಾರದಲ್ಲಿ ಕಾಂಗ್ರೆಸ್‌ನವರು ತಮ್ಮ ಸಮಸ್ಯೆಯನ್ನು ತಾವೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com