ಶಾಸಕ ಅನಿಲ್ ಚಿಕ್ಕಮಾದು
ಶಾಸಕ ಅನಿಲ್ ಚಿಕ್ಕಮಾದು

ಬಿಜೆಪಿ ಸೇರುವಂತೆ ಸಿ.ಪಿ.ಯೋಗೇಶ್ವರ್ 100 ಕೋಟಿ ಆಮಿಷ- ಶಾಸಕ ಅನಿಲ್ ಚಿಕ್ಕಮಾದು ಆರೋಪ

ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಕಳೆದೊಂದು ವಾರದಿಂದ ಬಿಜೆಪಿ ಸೇರುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಸೇರ್ಪಡೆಯಾದರೆ 100 ಕೋಟಿ ಜೊತೆಗೆ ಇನ್ನಿತರ ಸವಲತ್ತು ಒದಗಿಸುವುದಾಗಿ ಹೇಳಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಆರೋಪಿಸಿದ್ದಾರೆ

ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ  ಹಣದ ಆಮಿಷವೊಡ್ಡುವ ಮೂಲಕ  ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪದ ಬೆನ್ನಲ್ಲೇ  ಎಚ್. ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಿಲ್ ಚಿಕ್ಕಮಾದು , ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಕಳೆದೊಂದು ವಾರದಿಂದ ಬಿಜೆಪಿ ಸೇರುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಸೇರ್ಪಡೆಯಾದರೆ 100 ಕೋಟಿ  ಜೊತೆಗೆ ಇನ್ನಿತರ ಸವಲತ್ತು ಒದಗಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ನಿಂತರೆ ಚುನಾವಣಾ ವೆಚ್ಚವನ್ನು ತಾವೇ ಭರಿಸುವುದಾಗಿ ದೂರವಾಣಿ ಕರೆಯಲ್ಲಿ ತಿಳಿಸಿದ್ದಾರೆ ಎಂದರು.

ಆದರೆ, ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತಮ್ಮ ಕೈ ಹಿಡಿದಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ ಎಂದು ಸ್ಪಷ್ಟವಾಗಿ ಹೇಳಿರುವುದಾಗಿ  ಹೇಳಿದ ಅನಿಲ್ ಚಿಕಮಾದು, ಯೋಗೇಶ್ವರ್ ದೂರವಾಣಿಯಲ್ಲಿ ಮಾತನಾಡಿದ ಆಡಿಯೋ ರೆಕಾರ್ಡ್ ದಾಖಲೆ ತಮ್ಮ ಬಳಿ ಇರುವುದಾಗಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com