ದೆಹಲಿಗೆ ಬರುವಂತೆ ಸತೀಶ್ ಜಾರಕಿಹೊಳಿಗೆ ಹೈಕಮಾಂಡ್‌ನಿಂದ ಬುಲಾವ್ !
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುರೋಪ್ ಪ್ರವಾಸದಿಂದ ಬೆಂಗಳೂರಿಗೆ ವಾಪಾಸ್ಸಾದ ನಂತರ ರಾಜ್ಯ ಕಾಂಗ್ರೆಸ್ ನಲ್ಲಿನ ಅಸಮಾಧಾನ ಶಮನಕ್ಕೆ ವೇದಿಕೆ ಸಿದ್ದವಾಗಿದ್ದು, ದೆಹಲಿಗೆ ಬರುವಂತೆ ಹೈಕಮಾಂಡ್ ಸತೀಶ್ ಜಾರಕಿಹೊಳಿಗೆ ಬುಲಾವ್ ನೀಡಿದೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುರೋಪ್ ಪ್ರವಾಸದಿಂದ ಬೆಂಗಳೂರಿಗೆ ವಾಪಾಸ್ಸಾದ ನಂತರ ರಾಜ್ಯ ಕಾಂಗ್ರೆಸ್ ನಲ್ಲಿನ ಅಸಮಾಧಾನ ಶಮನಕ್ಕೆ ವೇದಿಕೆ ಸಿದ್ದವಾಗಿದ್ದು, ದೆಹಲಿಗೆ ಬರುವಂತೆ ಹೈಕಮಾಂಡ್ ಸತೀಶ್ ಜಾರಕಿಹೊಳಿಗೆ ಬುಲಾವ್ ನೀಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಇಂದು ಸತೀಶ್ ಜಾರಕಿಹೊಳಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ನಾಳೆ ಅಥವಾ ನಾಡಿದ್ದು, ದೆಹಲಿಗೆ ಬರುವಂತೆ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಈ ವಿಷಯ ತಿಳಿಸಿದ ಸತೀಶ್ ಜಾರಕಿಹೊಳಿ, ಕೆ. ಸಿ. ವೇಣುಗೋಪಾಲ್ ಅವರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ನಾಳೆ ಅಥವಾ ಬುಧವಾರ ದೆಹಲಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.