ಅಸ್ಥಿರ ಸರ್ಕಾರ: ಎಲ್ಲದಕ್ಕೂ ಸಿದ್ಧರಾಗಿರಿ- ಯಡಿಯೂರಪ್ಪ

ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಪುನರ್ ಉಚ್ಚರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ , ಯಾವುದೇ ಸಂಭವನೀಯತೆಗಾಗಿ ಸಿದ್ಧರಾಗಿರುವಂತೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬಿಜೆಪಿ ವಿಶೇಷ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ
ಬಿಜೆಪಿ ವಿಶೇಷ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ
Updated on

ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು  ಪುನರ್ ಉಚ್ಚರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ , ಯಾವುದೇ ಸಂಭವನೀಯತೆಗಾಗಿ ಸಿದ್ಧರಾಗಿರುವಂತೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಅರಮನೆ ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಿಜೆಪಿ ವಿಶೇಷ ಸಭೆಯಲ್ಲಿ  ಮಾತನಾಡಿದ ಅವರು, ಜಾರಕಿಹೊಳಿ ಸಹೋದರರ ನಡುವಿನ ಭಿನ್ನಮತದಿಂದಾಗಿ ಸರ್ಕಾರ ಅಲುಗಾಡುತ್ತಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು  ಬಿಜೆಪಿ ಶಾಸಕರನ್ನು ಸೆಳೆಯಲು  ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಯತ್ನಿಸುತ್ತಿವೆ, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಶಾಸಕರನ್ನು  ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ   ಎಂದು ಆರೋಪಿಸಿದರು.

ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ತಮ್ಮನ್ನು ಒತ್ತಾಯಿಸುತ್ತಿದ್ದಾರೆ ಎಂಬ ಶಾಸಕ ಸುಭಾಷ್ ಗುತ್ತೇದಾರ್  ಆರೋಪ ಕುರಿತು ಪ್ರಸ್ತಾಪಿಸಿದ  ಯಡಿಯೂರಪ್ಪ, ಮುಖ್ಯಮಂತ್ರಿಯೇ ಬಿಜೆಪಿ ಶಾಸಕರನ್ನು ಸೆಳೆಯಲು ನಿಂತಿರುವುದರಿಂದ ಅಸ್ಥಿರ ಸರ್ಕಾರದ ಸ್ಪಷ್ಟ ಗೋಚರವಾಗುತ್ತಿದ್ದು ಸರ್ಕಾರ ಯಾವಾಗ ಬೇಕಾದರೂ ಪತನಗೊಳ್ಳಬಹುದು ಎಂದರು.

ನಂತರ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಹೊರಗಿನ ಹಸ್ತಕ್ಷೇಪವಿಲ್ಲದೆ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ರಾಜ್ಯದಲ್ಲಿ ಅಭದ್ರತೆ ಕಾಡುತ್ತಿದೆ. ಆದಾಗ್ಯೂ, ಬಿಜೆಪಿ ಸರ್ಕಾರವನ್ನು ಪತನಗೊಳಿಸುವ ಕೆಲಸಕ್ಕೆ  ಕೈ ಹಾಕುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com