ಸಿದ್ಧಾಂತ ಮಾತನಾಡುವ ಬಿಜೆಪಿಯಿಂದ ಹೀನ ರಾಜಕೀಯ: ಸಿದ್ದರಾಮಯ್ಯ

ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ವಾಗ್ದಾಳಿ ತಾರಕಕ್ಕೇರಿದ್ದು, ಸಿದ್ಧಾಂತ ಮಾತನಾಡುವ ಬಿಜೆಪಿ ಕೈ ಶಾಸಕರ ಸೆಳೆಯುವ ಪ್ರಯತ್ನದ ಮೂಲಕ ಹೀನ ರಾಜಕೀಯಕ್ಕೆ ಇಳಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ವಾಗ್ದಾಳಿ ತಾರಕಕ್ಕೇರಿದ್ದು, ಸಿದ್ಧಾಂತ ಮಾತನಾಡುವ ಬಿಜೆಪಿ ಕೈ ಶಾಸಕರ ಸೆಳೆಯುವ ಪ್ರಯತ್ನದ ಮೂಲಕ ಹೀನ ರಾಜಕೀಯಕ್ಕೆ ಇಳಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ರಾಜಕೀಯ ಬಿಕ್ಕಟ್ಟಿನ ಬಳಿಕ ಕರ್ನಾಟಕ ರಾಜಕೀಯದಲ್ಲಿ ಮತ್ತೆ ಶಾಸಕರ ಕುದುರೆ ವ್ಯಾಪಾರದ ಸುದ್ದಿ ಕೇಳಿಬರುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ನಿನ್ನೆಯಷ್ಟೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಕೂಡ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, 'ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು ಅದನ್ನು ಬಿಟ್ಟು ಸರ್ಕಾರವನ್ನು ಅಸ್ಥಿರಗೊಳಿಸುವ ಅನೀತಿಯುತ ಪ್ರಯತ್ನ ಮಾಡಬಾರದು. ರಾಜ್ಯದ ಜನ ಇದನ್ನು ಗಮನಿಸುತ್ತಾ ಇದ್ದಾರೆ, ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ' ಎಂದು ಹೇಳಿದ್ದಾರೆ. 
ಅಂತೆಯೇ 'ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಮುಂಬೈಗೆ ಹೋಗಿಲ್ಲ, ಸರ್ಕಾರ ಸುಭದ್ರವಾಗಿದೆ. ನರೇಂದ್ರ ಮೋದಿಯವರು ಜನರ ಅಕೌಂಟ್‌ಗೆ ಹಾಕುತ್ತೇನೆ ಎಂದು ಹೇಳಿದ್ದ ಮೊತ್ತದ ನೂರು ಪಟ್ಟು ಹೆಚ್ಚು ಹಣ ನೀಡುತ್ತೇವೆ ಎಂದು ನಮ್ಮ ಶಾಸಕರಿಗೆ ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ‌, ಆದರೆ ನಮ್ಮ ಶಾಸಕರು ಆಮಿಷಗಳಿಗೆ ಬಲಿಯಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸುವುದಿಲ್ಲ' ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com