ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಆಮಿಷ: ಬಿಜೆಪಿ ವಿರುದ್ಧ ಜೆಡಿಎಸ್ ಸ್ಪೀಕರ್'ಗೆ ದೂರು

ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಬಿಜೆಪಿ ಆಮಿಷ ಒಡ್ಡುತ್ತಿದ್ದು, ಅಧಿಕಾರದ ಲಾಲಸೆಗಾಗಿ ಆಯ್ಕೆಯಾದ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ಶಾಸಕರ ಪ್ರಯತ್ನವನ್ನು ತಡೆಯಬೇಕೆಂದು ವಿಧಾನಸಭಾಧ್ಯಕ್ಷ ರಮೇಶ್...
ವಿಧಾನಸಭಾಧ್ಯಕ್ಷ ರಮೇಶ್
ವಿಧಾನಸಭಾಧ್ಯಕ್ಷ ರಮೇಶ್
Updated on: 
ಬೆಂಗಳೂರು: ಸರ್ಕಾರ ಅಸ್ಥಿರಗೊಳಿಸಲು ಶಾಸಕರಿಗೆ ಬಿಜೆಪಿ ಆಮಿಷ ಒಡ್ಡುತ್ತಿದ್ದು, ಅಧಿಕಾರದ ಲಾಲಸೆಗಾಗಿ ಆಯ್ಕೆಯಾದ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ಶಾಸಕರ ಪ್ರಯತ್ನವನ್ನು ತಡೆಯಬೇಕೆಂದು ವಿಧಾನಸಭಾಧ್ಯಕ್ಷ ರಮೇಶ್ ಅವರಿಗೆ ಜೆಡಿಎಸ್ ಮನವಿ ಮಾಡಿಕೊಂಡಿದೆ. 
ವಿಧಾನಸಬಾಧ್ಯಕ್ಷರಿಗೆ ಈ ಕುರಿತು ಪತ್ರ ಬರೆದಿರುವ ಜೆಡಿಎಸ್ ವಕ್ತಾರ ರಮೇಶ್ ಬಾಬು ಅವರು, ಮೈತ್ರಿ ಸರ್ಕಾರದ ಶಾಸಕರನ್ನು ತನ್ನತ್ತ ಸೆಲೆಯಲು ಬಿಜೆಪಿ ಕೋಟಿಗಟ್ಟಲೆ ಆಮಿಷ ಒಡ್ಡುತ್ತಿದೆ. ರಾಜ್ಯದಲ್ಲಿ ಸರ್ಕಾರ ರಚಿಸುವ ಉದ್ದೇಶದಿಂದ ಬಿಜೆಪಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಅನೈತಿಕ ದಾರಿ ಹಿಡಿದಿದೆ. ಈ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನಾಗಮಂಗಲ ಶಾಸಕ ಸುರೇಶ್ ಗೌಡರಿಗೆ ರೂ.30 ಕೋಟಿ ಆಮಿಷ ಒಡ್ಡಲಾಗಿದೆ. ಇತರೆ ಶಾಸಕರಿಗೂ ಬಿಜೆಪಿ ಆಮಿಷವೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. 
ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಯಾವುದೇ ಚುನಾಯಿತ ಶಾಸಕರು ಭಾಗಿಯಾಗಿದ್ದರೆ ಅಥವಾ ಅಕ್ರಮಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕುಮ್ಮಕ್ಕು ನೀಡಿದ್ದರೆ ಅಂಥಹವರ ವಿರುದ್ಧ ಸಂವಿಧಾನ ರಕ್ಷಣೆಯ ಹೊಣೆ ಹೊತ್ತಿರುವ ಸಭಾಧ್ಯಕ್ಷರು ಕ್ರಮ ಕೈಗೊಳ್ಳಬೇಕು. ಅಕ್ರಮ ಚಟುವಟಿಕೆ ಮೂಲಕ ಸಂಸದೀಯ ವ್ಯವಸ್ಥೆಯನ್ನು ಘಾಸಿಗೊಳಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com