

ಹಾಸನ: ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಹ ವಿಶೇಷತೆ ಏನೂ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಸನ ಹಾಗೂ ಸುತ್ತಮುತ್ತಲಿನ ಜಿಲ್ಲೆಗೆ ಸೇರಿದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಹಾಸನದಲ್ಲಿ ಶಾಸಕಾಂಗ ಸಭೆ ಮಾಡಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.
ಬಿಜೆಪಿ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಬಿಜೆಪಿ ರಾಜಕಾರಣಗೊಳಿಸುತ್ತಿದೆ. ಈ ವಿಚಾರದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡಲು ಆಸಕ್ತಿ ಇಲ್ಲ ಎಂದರು.
ಬಿಜೆಪಿಯ ಆಪರೇಷನ್ ಕಮಲ ಕುರಿತಂತೆ ಮಾತನಾಡಿದ ದೇವೇಗೌಡ, ಜೆಡಿಎಸ್ , ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರನ್ನು ಅಸ್ಥಿರಗೊಳಿಸಲು ಬಿಜೆಪಿ ಕೆಲ ತಿಂಗಳುಗಳಿಂದ ಪ್ರಯತ್ನ ನಡೆಸುತ್ತಿದೆ ಎಂದು ತಿಳಿಸಿದರು.