ಕಾಂಗ್ರೆಸ್ 'ದೊಡ್ಡ ಸಹೋದರ ' ರೀತಿಯಲ್ಲಿ ವರ್ತಿಸಬೇಕು - ಎನ್. ಮಹೇಶ್

ಸ್ವ ಪ್ರತಿಷ್ಠೆಯಿಂದ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾಠ ಕಲಿತಿದ್ದು, ಮಧ್ಯಪ್ರದೇಶ , ರಾಜಸ್ತಾನ ಹಾಗೂ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ದೊಡ್ಡ ಸಹೋದರನ ರೀತಿಯಲ್ಲಿ ವರ್ತಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ.
ಎನ್. ಮಹೇಶ್
ಎನ್. ಮಹೇಶ್

ಬೆಂಗಳೂರು: ಸ್ವ ಪ್ರತಿಷ್ಠೆಯಿಂದ ಇತ್ತೀಚಿನ  ಚುನಾವಣೆಗಳಲ್ಲಿ ಕಾಂಗ್ರೆಸ್  ಪಾಠ ಕಲಿತಿದ್ದು,  ಮಧ್ಯಪ್ರದೇಶ , ರಾಜಸ್ತಾನ ಹಾಗೂ ಛತ್ತೀಸ್ ಗಡದಲ್ಲಿ ಕಾಂಗ್ರೆಸ್  ದೊಡ್ಡ ಸಹೋದರನ ರೀತಿಯಲ್ಲಿ ವರ್ತಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದ್ದಾರೆ.

ಕಾಂಗ್ರೆಸ್  ಪಕ್ಷದ ಪ್ರತಿಷ್ಠೆಯಿಂದಾಗಿ ಛತ್ತೀಸ್ ಗಡದಲ್ಲಿ ಬಿಎಸ್ ಪಿ ತನ್ನ ಬೆಂಬಲವನ್ನು ವಾಪಾಸ್ ಪಡೆದುಕೊಂಡಿದೆ. ಆದರೆ, ಕರ್ನಾಟಕದ ವಿಚಾರ ಬೇರೆ ರೀತಿಯದ್ದಾಗಿದ್ದು ಇಲ್ಲಿನ ಕಾಂಗ್ರೆಸ್ ನಾಯಕರು ಉತ್ತಮರಾಗಿದ್ದು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲಾ, ಇದರಿಂದ ಉತ್ತಮ ಆಡಳಿತ ನಡೆಸಲು ಅನುಕೂಲವಾಗಿದೆ ಎಂದರು.

ಚುನಾವಣಾ ನೀತಿ ಸಂಹಿತೆ ಮತ್ತಿತರ ಕಾರಣಗಳಿಂದಾಗಿ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಮುಂದಿನ ತಿಂಗಳು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ  ಸಂಪುಟ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಿದರು.

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ,  ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಆಶೀರ್ವಾದದಿಂದ ತಾವೂ ಸಚಿವರಾಗಿದ್ದು, ಪುಟ್ಟರಂಗಶೆಟ್ಟಿ ತಮ್ಮನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು.

ಒಂದನೇ ತರಗತಿಯಿಂದಲೇ ಒಂದು ವಿಷಯವಾಗಿ ಇಂಗ್ಲೀಷ್ ಭಾಷೆಯನ್ನು ಪರಿಚಯಿಸಲು ಚಿಂತನೆ ನಡೆಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಸಭಾಪತಿ ಹೊರಟಿ ಇದಕ್ಕೆ ಒಪ್ಪಿಗೆ ನೀಡಿದ್ದಾರೆ . ಸರ್ಕಾರ ಮೌಲ್ಯ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಿದೆ. ಅದಕ್ಕಾಗಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಎನ್. ಮಹೇಶ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com