ಬೆಂಗಳೂರು: ಜೆಡಿಎಸ್ ಶಾಸಕಾಂಗ ಸಭೆ ಬಳಿಕ ರಾಜಧಾನಿಗೆ ಮರಳಿರುವ ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮನೆಗೆ ದಿಢೀರ್ ಭೇಟಿ ನೀಡಿ, ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿದ್ದ ರೇವಣ್ಣ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ರೇವಣ್ಣ ಅವರು ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿ ಅವರೊಂದಿಗೂ ಕೂಡ ಮಾತುಕತೆ ನಡೆಸಿದ್ದಾರೆ. ಭೇಟಿಯ ವೇಳೆ ಶಾಸಕರಾದ ಶಿವರಾಮ್ ಹೆಬ್ಬಾರ್, ಎಂಟಿಬಿ ನಾಗರಾಜ್, ಕೂಡ ಹಾಜರಿದ್ದರು.
ಈ ಕುರಿತು ಮಾತನಾಡಿರುವ ರೇವಣ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದರಲ್ಲಿ ವಿಶೇಷತೆ ಇಲ್ಲ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಡಿಕೆಶಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಇಂದು ಡಿಕೆಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಇದೊಂದು ಸೌಜನ್ಯ ಭೇಟಿ ಅಷ್ಟೇ ಎಂದು ಹೇಳಿದ್ದಾರೆ.
ಇನ್ನೂ ಅಕ್ಟೋಬರ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗಿದೆ.