ಮುಖ್ಯಮಂತ್ರಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ ಬಿಜೆಪಿ !

ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಂಡ್ಯದಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ  ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಉಪ ಚುನಾವಣೆ ಮುಗಿದ ಬಳಿಕ   ಸಾಲ ಮನ್ನಾ ಆಗಲಿರುವ ರೈತರಿಗೆ  ಸಾಲ ಮುಕ್ತ ಪ್ರಮಾಣ ಪತ್ರ ನೀಡುವುದಾಗಿ ಮುಖ್ಯಮಂತ್ರಿ ಹೆಚ್ . ಡಿ. ಕುಮಾರಸ್ವಾಮಿ  ಭರವಸೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಿಜೆಪಿ ಚುನಾವಣಾ ಆಯೋಗ ವಿಭಾಗದ ಸಂಘಟಕ ದತ್ತಗುರು ಹೆಗ್ಡೆ ಹಾಗೂ ಬಿಜೆಪಿ ವಕ್ತಾರ ಎ. ಹೆಚ್ ಆನಂದ್ ಈ ದೂರು ದಾಖಲಿಸಿದ್ದು. ಉಪ ಚುನಾವಣೆ ಮುಗಿಯುವವರೆಗೂ ಯಾವುದೇ  ಭರವಸೆ ನೀಡದಂತೆ  ಕುಮಾರಸ್ವಾಮಿ ಅವರಿಗೆ ನಿರ್ದೇಶನ ನೀಡಬೇಕೆಂದು  ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ನವೆಂಬರ್ 3 ರಂದು ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಸರ್ಕಾರ ರೈತರ ಸಾಲ ಮನ್ನಾ ಮಾಡದಿದ್ದರೂ ಕುಮಾರಸ್ವಾಮಿ ಇಂತಹ  ಹೇಳಿಕೆ ಕೂಡಾ ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಇಂತಹ ಹೇಳಿಕೆ ನೀಡದಂತೆ ತಡೆಗಟ್ಟುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com