ದಾವಣಗೆರೆ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಪೊಲೀಸರ ವಶಕ್ಕೆ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ 5 ಜನರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಎಸ್ಎ ರವೀಂದ್ರನಾಥ್
ಎಸ್ಎ ರವೀಂದ್ರನಾಥ್
Updated on
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ 5 ಜನರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿದ್ದಾರೆ. 
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾದ ಎಸ್.ಎ.ರವೀಂದ್ರ ನಾಥ್ ಹಾಗೂ ಇತರರನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಹ ಆರೋಪಿಯಾಗಿದ್ದರು. ಆವರು ಇಂದಿನ ಕೋರ್ಟ ಕಲಾಪಕ್ಕೆ ಗೈರು ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com