ಎಚ್.ವಿಶ್ವನಾಥ್
ರಾಜಕೀಯ
ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ವಿಶ್ವನಾಥ್ ರಾಜಕೀಯ ನಿವೃತ್ತಿ
ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ದಿಸುತ್ತಿಲ್ಲ, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ತಾವು ಸಕ್ರಿಯ ರಾಜಕೀಯದಿಂದ ...
ಮೈಸೂರು: ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ದಿಸುತ್ತಿಲ್ಲ, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ತಾವು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಜೆಡಿಎಸ್ ಉಚ್ಛಾಟಿತ, ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್‍ನಿಂದ ಉಚ್ಛಾಟನೆ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಪಂಚ ವಿಶಾಲವಾಗಿದೆ. ಅತೃಪ್ತ ಶಾಸಕರೇ ಸೇರಿ ಒಂದು ಪಕ್ಷವನ್ನು ಕಟ್ಟಿದರೆ ಆಗುತ್ತೆ ಬಿಡಿ. ಹೊಸ ಪಕ್ಷ ಕಟ್ಟಬೇಕಿದೆ. ನಾನು ಚುನಾವಣೆಯಿಂದ ದೂರ ಉಳಿಯಲು ನಿರ್ಧಸಿದ್ದೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ವಿಶ್ವನಾಥ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡರಲಿಲ್ಲ, ಜೊತೆಗೆ ಸಾ.ರಾ ಮಹೇಶ್ ಗೆ ಹೆಚ್ಚಿ ಆದ್ಯತೆ ನೀಡುತ್ತಿದ್ದದ್ದು, ವಿಶ್ವನಾಥ್ ಅವರಿಗೆ ಬೇಸರ ಮೂಡಿಸಿತ್ತು, ಇದರಿಂದ ಬೇಸತ್ತಿದ್ದ ವಿಶ್ವನಾಥ್ ರಾಜಿನಾಮೆ ನೀಡಿ ಕಾಂಗ್ರೆಸ್ ಶಾಸಕರೊಂದಿಗೆ ಸೇರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ