ನಿಖಿಲ್ ರಾಜಕೀಯ ಭವಿಷ್ಯ ಹಾಳು ಮಾಡಿದ್ದೆ ಮಾಧ್ಯಮಗಳು; ಮೈತ್ರಿ ಖತಂ: ಎಚ್‍ಡಿಕೆ ಅಧಿಕೃತ ಘೋಷಣೆ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. 17 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on
ಕೆಆರ್ ಪೇಟೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. 17 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಕೆಆರ್ ಪೇಟೆಯಲ್ಲಿ ಕಾರ್ಯಕರ್ತರ ಸಭೆ ಕುಮಾರಸ್ವಾಮಿ ಸಭೆ ನಡೆಸಿದರು. ಈ ವೇಳೆ ಕಾರ್ಯಕರ್ತರು ಇನ್ನು ಮುಂದೆ ಕಾಂಗ್ರೆಸ್ ಜೊತೆ ಮೈತ್ರಿ ಬೇಡವೇ ಬೇಡ ಎಂದು ಮನವಿ ಮಾಡಿದರು. ಕಾರ್ಯಕರ್ತರ ಮನವಿ ಮೇರೆಗೆ ಮುಂದಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಬಹಿರಂಗವಾಗಿ ಹೇಳಿದರು. 
ಬಿಎಸ್ ಯಡಿಯೂರಪ್ಪನವರ ಸರ್ಕಾರ ಸಹ ಹೆಚ್ಚು ದಿನ ಉಳಿಯುವುದಿಲ್ಲ. ಮುಂದೆ ರಾಜ್ಯದ 224 ಕ್ಷೇತ್ರಕ್ಕೂ ಚುನಾವಣೆ ನಡೆದರೆ ಅದಕ್ಕೆ ಸಿದ್ಧರಾಗಿರೀ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. 
ಇನ್ನು ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ ಅವರು, ನಿಖಿಲ್ ಕುಮಾರ್ ಭವಿಷ್ಯ ಹಾಳು ಮಾಡಿದ್ದೆ ಮಾಧ್ಯಮಗಳು. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ರ ರಾಜಕೀಯ ಬೆಳವಣೆಗೆಯನ್ನೇ ಕುಂಠಿಗೊಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com