ಪ್ರತಿಪಕ್ಷ ನಾಯಕರು ಮೊಸರಿನಲ್ಲಿ ಕಲ್ಲು ಹುಡುಕಬಾರದು: ರೇಣುಕಾಚಾರ್ಯ

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದಾರೆ, ಆದರೂ ಪ್ರತಿಪಕ್ಷ ನಾಯಕರು ಮೊಸರಿನಲ್ಲಿ ಕಲ್ಲು ...
ರೇಣುಕಾಚಾರ್ಯ
ರೇಣುಕಾಚಾರ್ಯ
Updated on: 
ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದಾರೆ, ಆದರೂ ಪ್ರತಿಪಕ್ಷ ನಾಯಕರು ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ
ವಿಧಾನಸೌಧದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕಪಕ್ಷೀಯ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್ .ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರ ಪತನಗೊಂಡ ಹತಾಶೆಯಿಂದ ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದು ಅವರ ಘನತೆಗೆ ತರವಲ್ಲ ಎಂದರು
.
ಮುಖ್ಯಮಂತ್ರಿಯಾಗಿದ್ದಾಗ‌ ಸಿದ್ದರಾಮಯ್ಯ ಹೇಗೆ ಅಧಿಕಾರ ನಡೆಸಿದ್ದರು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಪ್ರತಿಪಕ್ಷನಾಯಕರಾಗಿ ಅವರು ತಮ್ಮ ಕರ್ತವ್ಯ ನಿಭಾಯಿಸುತ್ತಿಲ್ಲ. ಮೈಸೂರು ಭಾಗ ಬಿಟ್ಟು ಉತ್ತರ ಕರ್ನಾಟಕ ಭಾಗದಲ್ಲಿ ಅವರು ಏಕೆ ಪ್ರವಾಸ ಮಾಡುತ್ತಿಲ್ಲ. ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಏಕೆ ಭೇಟಿ ಕೊಡಲಿಲ್ಲ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com