ಸಿದ್ದರಾಮಯ್ಯ
ಸಿದ್ದರಾಮಯ್ಯ

ಈ ಅವಮಾನ, ನಿರ್ಲಕ್ಷ್ಯವನ್ನು ಸ್ವಾವಲಂಬಿ ಕರ್ನಾಟಕ ಸಹಿಸದು: ಸಿದ್ದರಾಮಯ್ಯ ರೋಷಾವೇಶ

ರಾಜ್ಯ ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ..

ಬೆಂಗಳೂರು:  ರಾಜ್ಯ ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ 61ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 40 ಸಾವಿರ ಕೋಟಿ ರು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಈಗಾಗಲೇ ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ, ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರು. ಬಿಡುಗಡೆ ಮಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಕೂಡಲೇ ತುರ್ತು 2 ಸಾವಿರ ಕೋಟಿ ರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ, ಆದರೆ ಇದುವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ನೆರೆ ಅಥವಾ ಬರ ಪರಿಸ್ಥಿತಿ ಎದುರಾದ ಸಂದರ್ಭಗಳಲ್ಲಿ  ಅಟಲ್ ಬಿಹಾರಿ ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರಗಳು ರಾಜ್ಯವನ್ನು  ರೀತಿ ನಿರ್ಲಕ್ಷ್ಯಿಸಿರಲಿಲ್ಲ, ರಾಜ್ಯದ ಮುಖ್ಯಮಂತ್ರಿಗಳನ್ನು ಈ ರೀತಿ, ಅವಮಾನಿಸಿರಲಿಲ್ಲ, ಸ್ವಾಭಿಮಾನಿ ಕರ್ನಾಟಕ ಇದನ್ನು ಸಹಿಸದು ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿ ಸರ್ಕಾರ ವಿರುದ್ದ  ಸಿದ್ದರಾಮಯ್ಯ ಹರಿ ಹಾಯ್ದಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com