17 ಸಚಿವರ ಪದಗ್ರಹಣ: ಹಳೇ ಮೈಸೂರಿಗಿಲ್ಲ ಒಂದೂ ಸ್ಥಾನ: ಬಿಎಸ್ ವೈ ಕಾಲಿಗೆರಗಿದ ರಾಮುಲು, ಅಶ್ವತ್ಥ ನಾರಾಯಣ

ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈಶ್ವರಪ್ಪ ಪ್ರಮಾಣ ವಚನ
ಈಶ್ವರಪ್ಪ ಪ್ರಮಾಣ ವಚನ
Updated on

ಬೆಂಗಳೂರು: ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು, ಬಹುತೇಕ ಎಲ್ಲಾ ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಮಲ್ಲೇಶ್ವರಂ ಶಾಸಕ ಅಶ್ವತ್ಥ ನಾರಾಯಣ, ಬಿ, ಶ್ರೀರಾಮುಲು ಸೇರಿದಂತೆ ಹಲವು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಕಾಲಿಗೆರಗಿ ಆಶೀರ್ವಾದ ಪಡೆದರು. 

ಗೋವಿಂದ ಕಾರಜೋಳ, ಡಾ ಅಶ್ವಥ ನಾರಾಯಣ ಸಿ, ಲಕ್ಷ್ಮಣ ಸಂಗಪ್ಪ ಸವದಿ, ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಜಗದೀಶ್ ಶೆಟ್ಟರ್, ಬಿ ಶ್ರೀರಾಮುಲು, ಎಸ್ ಸುರೇಶ್ ಕುಮಾರ್, ವಿ ಸೋಮಣ್ಣ, ಸಿ ಟಿ ರವಿ, ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಜೆ ಸಿ ಮಾಧುಸ್ವಾಮಿ, ಚಂದ್ರಕಾಂತ ಗೌಡ ಚನ್ನಪ್ಪಗೌಡ ಪಾಟೀಲ್, ಹೆಚ್ ನಾಗೇಶ್, ಪ್ರಭು ಚೌಹಾಣ್ ಮತ್ತು ಶಶಿಕಲಾ ಅಣ್ಣಾಸಾಹೇಬ್ ಜೊಳ್ಳೆ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ , ಸ್ವೀಕರಿಸಿದ್ದಾರೆ,

ದೋಸ್ತಿ ಸರ್ಕಾರದಲ್ಲಿ ಹಳೆ ಮೈಸೂರು ಭಾಗದ ಹಲವು ಶಾಸಕರು ಮಂತ್ರಿಯಾಗಿದ್ದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಓರ್ವ ಶಾಸಕನಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಮೈಸೂರು, ಚಾಮರಾಜನಗರ, ಮಡಿಕೇರಿ, ಹಾಸನ ಯಾವ ಜಿಲ್ಲೆಗಳಿಗೂ ಸಿಎಂ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಮೈಸೂರು, ಮಡಿಕೇರಿ, ಹಾಸನ, ಚಾಮರಾಜನಗರ ಭಾಗದಲ್ಲಿ ಎಂಟು ಶಾಸಕರು ಇದ್ದರು ಒಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಕಡೆ ಕ್ಷಣದವರೆಗೂ ರಾಮದಾಸ್ ಅವರಿಗೆ ಮಂತ್ರಿ ಸ್ಥಾನ ಖಚಿತ ಎಂದೇ ಭಾವಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಾಮದಾಸ್ ಅವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com