ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಕೇಂದ್ರ ನಾಯಕರು ಕಾರಣರಲ್ಲ: ದೇವೇಗೌಡ

ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಇತರ ನಾಯಕರು ಯಡಿಯೂರಪ್ಪ ಅವರನ್ನು ಕರೆದು ಸಿಬಿಐ ತನಿಖೆಗೆ ವಹಿಸುವಂತೆ ಸೂಚಿಸಿದ್ದಾರೆ ಎಂಬುದು ಶುದ್ದ ಸುಳ್ಳು ಎಂದು ಮಾಜಿ ಪ್ರಧಾನಿ ...
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
Updated on

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಇತರ ನಾಯಕರು ಯಡಿಯೂರಪ್ಪ ಅವರನ್ನು ಕರೆದು ಸಿಬಿಐ ತನಿಖೆಗೆ ವಹಿಸುವಂತೆ ಸೂಚಿಸಿದ್ದಾರೆ ಎಂಬುದು ಶುದ್ದ ಸುಳ್ಳು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಿಲುಕಿದ್ದಾರೆ ಎಂದೆಲ್ಲ ಹೇಳುತ್ತಿದ್ದಾರೆ. ಮಾಧ್ಯಮಗಳು ಇದೆನ್ನೆಲ್ಲ ವಿಜೃಂಭಿಸುವ ಅಗತ್ಯ ಇಲ್ಲ ಎನ್ನುವುದು ನನ್ನ ಭಾವನೆ. ಸುಪ್ರೀಂಕೋರ್ಟ್ ಕೂಡ ಒಂದು ಪ್ರಕರಣದಲ್ಲಿ ಫೋನ್ ಕದ್ದಾಲಿಕೆ ತಪ್ಪಲ್ಲ. ಕೆಲವು ವಿಚಾರಗಳಲ್ಲಿ ಕದ್ದಾಲಿಕೆ ಮಾಡಬಹುದು ಎಂದು ತಿಳಿಸಿರುವುದಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದ್ದಾರೆ. 

ಕಳೆದ ಮೂರ್ನಾಲ್ಕು ದಿನಗಳಿಂದ ಫೋನ್ ಕದ್ದಾಲಿಕೆ ಪ್ರಕರಣವನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ. ಆದರೆ, ಅದಕ್ಕೆ ಅಷ್ಟು ಮಹತ್ವ ಕೊಡಬೇಕಿಲ್ಲ ಎಂದು ಅಭಿಪ್ರಾಯಪಟ್ಟರು. 

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಟೆಲಿಫೋನ್ ಕದ್ದಾಲಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಯಾವ್ಯಾವ ಸರ್ಕಾರದಲ್ಲಿ ಎಷ್ಟು ಫೋನ್ ಟ್ಯಾಪಿಂಗ್ ಆಗಿದೆ ಅನ್ನೋದನ್ನ ಟಿವಿಗಳಲ್ಲಿ ನೋಡಿದ್ದೇನೆ. ಇಂತಹ ಸ್ಥಿತಿಯಲ್ಲಿ ಈ ವಿಚಾರಕ್ಕೆ ಒತ್ತು ನೀಡುವುದಿಲ್ಲ ಎಂದು ಹೇಳಿದರು. 

ರಾಜ್ಯದ ಜನಶಕ್ತಿ, ಆದಾಯ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಕೇಂದ್ರ ಸರಕಾರ ನೆರೆ ಪರಿಹಾರ ಘೋಷಣೆ ಮಾಡಬೇಕು. ಸದ್ಯ ನನಗೆ ಸಂಬಳ ಬರಲ್ಲ. ಹೀಗಾಗಿ ನಾನು ಕಿರು ಕಾಣಿಕೆ ಕೊಟ್ಟಿದ್ದೇನೆ. ಒಂದು ತಿಂಗಳ ನಂಬಳ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿರುವುದಾಗಿ ದೇವೇಗೌಡರು ತಿಳಿಸಿದರು. 

ಪೋನ್ ಟ್ಯಾಪಿಂಗ್ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿರುವುದನ್ನು ಗಮನಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತನಿಖೆಗೆ ಸಿದ್ಧ ಎಂದಿದ್ದಾರೆ. ಅಷ್ಟೆ ಅಲ್ಲದೆ, ಆಪರೇಷನ್ ಕಮಲದ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿರುವುದಾಗಿ ದೇವೇಗೌಡರು ತಿಳಿಸಿದರು. 

ಈ ಹಿಂದೆ ಆಪರೇಷನ್ ಕಮಲದ ಆಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದರು. ಬಳಿಕ ತಮ್ಮದಲ್ಲ ಎಂದು ಉಲ್ಟಾ ಹೊಡೆದರು. ಯಡಿಯೂರಪ್ಪ ಸ್ಟಿಂಗ್ ಆಪರೇಶನ್ ರೆಫರ್ ಮಾಡಬೇಕಾ?, ಎಂದು ಪ್ರಶ್ನಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com