ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ: ಕಟೀಲ್ ಮೊದಲ ಮಾತು

ಪಕ್ಷದ ವರಿಷ್ಟರು ದೊಡ್ಡ ಜವಾಬ್ದಾರಿ ‌ನನಗೆ ವಹಿಸಿದ್ದಾರೆ. ಪಕ್ಷದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಾನು ಈ ಮಟ್ಟಕ್ಕೆ ಬೆಳೆಯಲು ಜಿಲ್ಲೆಯ ಕಾರ್ಯಕರ್ತರು ಹಾಗೂ ಜನತೆ ಕಾರಣ
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Updated on: 

ಮಂಗಳೂರು: ಪಕ್ಷದ ವರಿಷ್ಟರು ದೊಡ್ಡ ಜವಾಬ್ದಾರಿ ‌ನನಗೆ ವಹಿಸಿದ್ದಾರೆ. ಪಕ್ಷದ ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಾನು ಈ ಮಟ್ಟಕ್ಕೆ ಬೆಳೆಯಲು ಜಿಲ್ಲೆಯ ಕಾರ್ಯಕರ್ತರು ಹಾಗೂ ಜನತೆ ಕಾರಣ ಅವರೆಲ್ಲರಿಗೂ ಅಬಾರಿಯಾಗಿದ್ದೇನೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್‍ ಹೇಳಿದ್ದಾರೆ.

ಕೇರಳದ ಎರ್ನಾಕುಲಂ ನಲ್ಲಿ ಬಿಜೆಪಿ ರಾಜ್ಯರಾಜಕಾರಿಣಿ ಸಭೆಯಲ್ಲಿ ಭಾಗವಹಿಸಿ ಇಂದು ಮುಂಜಾನೆ ಮಂಗಳೂರಿನ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಮಟ್ಟದ ಹುದ್ದೆಗಳು ನಿರ್ವಹಿಸಲು ಅವಕಾಶ ಸಿಗುತ್ತದೆ ಎನ್ನುವುದಕ್ಕೆ ನಾನೇ ನಿದರ್ಶನ. ರಾಜ್ಯದಲ್ಲಿ ಈಗ ಬಿಜೆಪಿ ಸರ್ಕಾರವಿದೆ. ಬಿ.ಎಸ್‍ ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಧೃಡವಾಗಿದೆ. ಅವರ ಮಾರ್ಗದರ್ಶನ, ಸಹಕಾರ ಪಡೆದು ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಸಧೃಡಗೊಳಿಸುವ ಸಂಕಲ್ಪ ಮಾಡಲಿದ್ದೇನೆ ಎಂದು ತಿಳಿಸಿದರು. 

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನನ್ನ ಮೇಲೆ ಭರವಸೆಯಿಟ್ಟು ಈ ಸ್ಥಾನ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಿಗೆ ರಾಜ್ಯ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಆ ನಿರೀಕ್ಷೆಗೆ ಚ್ಯುತಿ ಬಾರದಂತೆ ಕೆಲಸ ಮಾಡಿ, ರಾಜ್ಯದ ಹಿರಿಯ ನಾಯಕರ ಸಲಹೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ. ಕಾರ್ಯಕರ್ತರ, ನಾಯಕರ ಭರವಸೆಯನ್ನು ಉಳಿಸುತ್ತೇನೆ" ಎಂದು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com