ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ: ಎಚ್ ಡಿ ದೇವೇಗೌಡ

ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತೆರೆಮರೆಯಲ್ಲಿ ಸಹಕರಿಸಿದ್ದರು ಎಂಬ ಆರೋಪದ ಬೆನ್ನಲ್ಲೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ...
ದೇವೇಗೌಡ
ದೇವೇಗೌಡ
Updated on: 

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ತೆರೆಮರೆಯಲ್ಲಿ ಸಹಕರಿಸಿದ್ದರು ಎಂಬ ಆರೋಪದ ಬೆನ್ನಲ್ಲೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ನೇರವಾಗಿಯೇ ಆರೋಪಿಸಿದ್ದಾರೆ.

ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ಮೊದಲಿಂದಲೂ ತಿಕ್ಕಾಟ ಇತ್ತು. ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ  ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕೆಂದು ಒತ್ತಾಯಿಸಿದ್ದರು. ಆದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಸಿದ್ದರಾಮಯ್ಯ ಅವರಿಗೆ ಇಷ್ಟವಿರಲಿಲ್ಲ ಎಂದರು.

ಕುಮಾರಸ್ವಾಮಿ ಮುಖ್ಯಮಂತ್ತಿಯಾಗುವುದಕ್ಕೆ ತಮ್ಮ ಒಪ್ಪಿಗೆ ಇಲ್ಲ ಎಂಬುದನ್ನು ಸಿದ್ದರಾಮಯ್ಯ ಅವರ ಆಪ್ತರೇ ಹೇಳಿದ್ದಾರೆ. ಕಾಂಗ್ರೆಸ್ ಜೊತೆ ಪಕ್ಷ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದ ಕುಮಾರಸ್ವಾಮಿಗೆ ದಿನನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಕಿರಿಕಿರಿ ನಡುವೆ ಸರ್ಕಾರ ನಡೆಸುತ್ತಿದ್ದ ಕುಮಾರಸ್ವಾಮಿ ಈಗ ನಿರಾಳರಾಗಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com