ರಾಜಕೀಯ

ಯಡಿಯೂರಪ್ಪಗೆ ಪರ್ಯಾಯ ನಾಯಕರಾಗಿ ಹೊರಹೊಮ್ಮಲಿದ್ದಾರಾ ಲಕ್ಷ್ಮಣ ಸವದಿ? 

ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ನಾಯಕ ಲಕ್ಷ್ನಣ ಸವದಿ ಅವರನ್ನು ಡಿಸಿಎಂ ಆಗಿ ನೇಮಕ ಮಾಡಿರುವುದು ಎಲ್ಲರ ಹುಬ್ಬು ಮೇಲೇರುವಂತೆ ಮಾಡಿದೆ. 2018ರ ವಿದಾನಸಭೆ ಚುನಾವಣೆಯಲ್ಲಿ ಸೋತ ಬಳಿಕವೂ ಲಕ್ಷ್ಮಣ ಸವದಿ..

ಯಡಿಯೂರಪ್ಪಗೆ ಪರ್ಯಾಯ ನಾಯಕರಾಗಿ ಹೊರಹೊಮ್ಮಲಿದ್ದಾರಾ ಲಕ್ಷ್ಮಣ ಸವದಿ? 
ಲಕ್ಷ್ಮಣ ಸವದಿ ಮತ್ತು ಯಡಿಯೂರಪ್ಪ
Published On :

ಬೆಂಗಳೂರು:  ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ನಾಯಕ ಲಕ್ಷ್ನಣ ಸವದಿ ಅವರನ್ನು ಡಿಸಿಎಂ ಆಗಿ ನೇಮಕ ಮಾಡಿರುವುದು ಎಲ್ಲರ ಹುಬ್ಬು ಮೇಲೇರುವಂತೆ ಮಾಡಿದೆ.  2018ರ ವಿದಾನಸಭೆ ಚುನಾವಣೆಯಲ್ಲಿ ಸೋತ ಬಳಿಕವೂ ಲಕ್ಷ್ಮಣ ಸವದಿ ಅವರಿಗೆ ಮಂತ್ರಿಗಿರಿ ನೀಡಿ ಡಿಸಿಎಂ ಮಾಡಿರುವುದು ಬಿಜೆಪಿಯ ಕೆಲ ನಾಯಕರಿಗೆ ಅಚ್ಚರಿ ತಂದಿದೆ.

ಲಿಂಗಾಯತ ಪ್ರಬಲ ನಾಯಕರಾಗಿರುವ  ಬಿ.ಎಸ್ ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ  ಸವದಿ ಅವರನ್ನು ಬೆಳೆಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿಯ ಕೆಲವು ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

76 ವರ್ಷದ ಯಡಿಯೂರಪ್ಪ ಈ ವಯಸ್ಸಿನಲ್ಲಿಯೂ ಬಿಜೆಪಿ ಹೈಕಮಾಂಡ್ ಬಿಎಸ ವೈ  ಅವರನ್ನು  ಸಿಎಂ ಹುದ್ದೆಗೆ ಆಯ್ಕೆ ಮಾಡಿದೆ, ಹೀಗಾಗಿ ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕತ್ವಕ್ಕಾಗಿ ಈ ನಿರ್ಧಾರ ಎಂಬ ಮಾತು ಕೇಳಿ ಬರುತ್ತಿದೆ.

ಸಂಪುಟಕ್ಕೆ ಸೇರಲು ಹಲವು ಮಂದಿ ಕಾಯುತ್ತಿದ್ದರು ಲಕ್ಷ್ಮಣ ಸವದಿ ಅವರನ್ನು ಏಕಾ ಏಕಿ ಸಚಿವರನ್ನಾಗಿ ಮಾಡಿದ್ದಲ್ಲದೇ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ,  ಇದು ನಮಗೆಲ್ಲಾ ಆಘಾತ ತಂದಿದೆ. ಶಾಸಕರಾಗಿ ಆಯ್ಕೆಯಾಗದಿರುವವರನ್ನು ಮಂತ್ರಿಯನ್ನಾಗಿ ಮಾಡಿದ್ದರ ಹಿಂದೆ ಬೇರೆ ಏನೋ ಕಾರಣ ಇರಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

2012ರಲ್ಲಿ ಡಿ. ವಿ. ಸದಾನಂದ ಗೌಡರು ಸಿಎಂ ಆಗಿದ್ದ ಕಾಲದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆ ಸಂದರ್ಭದಲ್ಲಿ ಸದನದಲ್ಲೇ 'ನೀಲಿ ಚಿತ್ರ' ವೀಕ್ಷಣೆ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯ್ತು. ಆ ಘಟನೆಯನ್ನು ಹೈ ಕಮಾಂಡ್ ಮರೆತಿರಬಹುದು,  ಮುಂಬುರುವ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ರಾಷ್ಟ್ರೀಯ ನಾಯಕರು ಲಕ್ಷ್ಮಣ ಸವದಿಯನ್ನು ಡಿಸಿಎಂ ಹುದ್ದೆಗೆ ಕರೆದು ತಂದು ಕೂರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಲಕ್ಷ್ಮಣ ಸವದಿ ರಾಜಕೀಯ ಮುನ್ನಲೆಗೆ ಬಂದಿದ್ದಾರೆ. ಬೆಳಗಾವಿ ಭಾಗದ ಪ್ರಬಲ ಲಿಂಗಾಯತ ನಾಯಕರಾಗಿ ಬೆಳೆಯುವ ಎಲ್ಲ ಸೂಚನೆಗಳನ್ನೂ ನೀಡಿದ್ದಾರೆ. 

ಉತ್ತರ ಕರ್ನಾಟಕದಲ್ಲಿ ಉಮೇಶ್ ಕತ್ತಿ ಮತ್ತು  ಜಾರಕಿಹೊಳಿ  ಸಹೋದರರನ್ನು ಹದ್ದು ಬಸ್ತಿನಲ್ಲಿಡಲು ಹೈಕಮಾಂಡ್ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.