ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ: ಸಿ.ಟಿ.ರವಿ

ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ, ಅದೇ ರೀತಿ ಪ್ರವಾಹ ಪರಿಸ್ಥಿತಿ ಅರಿಯಲು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಬೇಕಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಯವರ ಚಿಕ್ಕಮಗಳೂರು ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.
ಸಿ.ಟಿ ರವಿ
ಸಿ.ಟಿ ರವಿ

ಬೆಂಗಳೂರು: ಅನ್ನ ಬೆಂದಿದೆ ಎಂದು ತಿಳಿಯಲು ಎಲ್ಲ ಅಕ್ಕಿ ನೋಡಬೇಕಿಲ್ಲ, ಅದೇ ರೀತಿ ಪ್ರವಾಹ ಪರಿಸ್ಥಿತಿ ಅರಿಯಲು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಬೇಕಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಯವರ ಚಿಕ್ಕಮಗಳೂರು ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ ಕೈಗೊಂಡು ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದ್ದಾರೆ. ಇನ್ನೂ ನಾಲ್ಕೈದು ಗ್ರಾಮಕ್ಕೆ ಹೋಗಬೇಕಿತ್ತು. ಆದರೆ ಸಮಯದ ಅಭಾವದಿಂದ‌ ಹೋಗಲು ಸಾಧ್ಯವಾಗಿಲ್ಲ ಎಂದ ಅವರು, ಈ ಭೇಟಿ ಕಾಟಾಚಾರದ ಭೇಟಿ ಎನ್ನುವುದು ಸುಳ್ಳು, ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಇಳಿಯಲು ವಿಳಂಬ ಆಯಿತು. ಆದ್ದರಿಂದ ಎಲ್ಲಾ ಗ್ರಾಮಗಳ ಭೇಟಿ ಸಾಧ್ಯವಾಗಿಲ್ಲ ಎಂದು ಸಮರ್ಥಿಸಿಕೊಂಡರು.

ಮೂಡಿಗೆರೆ ತಾಲೂಕಿನ ಮನೆಮಲೆ ಗ್ರಾಮದ ಸ್ಥಿತಿ ನೋಡಿದ್ದಾರೆ. ಅನ್ನ ಬೆಂದಿದೆಯೋ ಎಂದು ತಿಳಿಯಲು ಎಲ್ಲ ಅಕ್ಕಿಯನ್ನು ಮುಟ್ಟಿ ನೋಡಬೇಕಿಲ್ಲ. ಇನ್ನೂ ನಾಲ್ಕೈದು ಗ್ರಾಮಕ್ಕೆ ಹೋಗಬೇಕಿತ್ತು. ಆದರೆ ಸಮಯದ ಅಭಾವದಿಂದ ಹೋಗಲು ಆಗಿಲ್ಲ. ಇನ್ನುಳಿದ ಪ್ರವಾಹ ಪೀಡಿತ ಪ್ರದೇಶದ ವಿಡಿಯೋ ತೋರಿಸುತ್ತೇವೆ. ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಸಭೆ ನಡೆಯಲಿದೆ ಎಂದುಸಚಿವ ಸಿ ಟಿ ರವಿ ಸ್ಪಷ್ಟನೆ ನೀಡಿದರು.

ಚಿಕ್ಕಮಗಳೂರಿನಲ್ಲಿ ಸಿಎಂ ಕಾಟಾಚಾರದ ಪರಿಶೀಲನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಂಗಳವಾರ ಸಿಎಂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆ. ಕಾಟಾಚಾರದ ಭೇಟಿ ಎನ್ನುವುದು ಸುಳ್ಳು. ವಾತಾವರಣದ ಕಾರಣ ಹೆಲಿಕಾಪ್ಟರ್ ಲ್ಯಾಂಡ್ ಆಗಲು ವಿಳಂಬವಾಯಿತು ಎಂದರು.

ಸರ್ಕಾರ ಟೇಕಾಫ್ ಆಗಿಲ್ಲ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ ಸಚಿವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಲ್ಲಿ ಪ್ರಶ್ನಾತೀತ ನಾಯಕ ಅಂದುಕೊಂಡಿದ್ದೆವು. ಅವರಲ್ಲಿ ಇನ್ನೂ ಪ್ರತಿಪಕ್ಷ ನಾಯಕ ಯಾರೆಂದು ನಿರ್ಧಾರ ಆಗಿಲ್ಲ. ಕಾಂಗ್ರೆಸ್ಸಿನಲ್ಲೇ ಸಿದ್ದರಾಮಯ್ಯ ಅವರ ಕಾಲೆಳೆಯೋರು ಜಾಸ್ತಿಯಾಗಿದ್ದಾರೆ. ಸಿದ್ದರಾಮಯ್ಯ ಮೊದಲು ತಮ್ಮ ಕಾಲು ಯಾರೂ ಎಳೆಯದಂತೆ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com