ಮಹಾರಾಷ್ಟ್ರ ರೀತಿಯಲ್ಲಿಯೇ ಬಿಜೆಪಿಗೆ ಮುಖಭಂಗ: ವಿ.ಎಸ್.ಉಗ್ರಪ್ಪ

ಮಹಾರಾಷ್ಟ್ರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದಂತೆ ಕರ್ನಾಟಕದಲ್ಲಿಯೂ ತೀವ್ರ ಮುಖಭಂಗ ಅನುಭವಿಸಲಿದ್ದು, ಡಿ‌. 9 ರ‌‌ ಬಳಿಕ ರಾಜ್ಯದ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ...
ಉಗ್ರಪ್ಪ
ಉಗ್ರಪ್ಪ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದಂತೆ ಕರ್ನಾಟಕದಲ್ಲಿಯೂ ತೀವ್ರ ಮುಖಭಂಗ ಅನುಭವಿಸಲಿದ್ದು, ಡಿ‌. 9 ರ‌‌ ಬಳಿಕ ರಾಜ್ಯದ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಭವಿಷ್ಯ ನುಡಿದಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದ್ದು ಅನರ್ಹರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಲೆ ಎದ್ದಿದೆ. ಹದಿನೈದು ಕ್ಷೇತ್ರಗಳಲ್ಲಿ ಗೆದ್ದೇ ಬಿಟ್ಟಿದ್ದೇವೆ ಎಂದು ಯಡಿಯೂರಪ್ಪ ತಿರುಕನ ಕನಸು ಕಾಣುತ್ತಿದ್ದಾರೆ.

ಅನರ್ಹರ ತ್ಯಾಗದಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಅನರ್ಹರ ಹಿತಕಾಪಾಡಿ ಅವರನ್ನು ಸಚಿವರನ್ನಾಗಿಸುತ್ತೇವೆ ಎಂದು ಅವರು ನೀತಿ ಸಂಹಿತೆ ಉಲ್ಲಂಘಿಸಿ ಪದೇಪದೇ ಹೇಳಿಕೆ ನೀಡುತ್ತಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದ್ದರೂ ಚುನಾವಣಾ ಆಯೋಗ ಮೌನ ವಹಿಸಿದ್ದು ಏಕೆ ? ಎಂದು ಉಗ್ರಪ್ಪ ಪುನರ್ ಪ್ರಶ್ನಿಸಿದರು.

ಮತದಾರರನ್ನು ಓಲೈಸಲು ಹೇಳಿಕೆಗಳ ಮೇಲೆ‌ ಹೇಳಿಕೆ ನೀಡುತ್ತಿದ್ದಾರೆ.ಆದರೂ ಆಯೋಗ ಕಣ್ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com