ಬಿ ಎಲ್ ಸಂತೋಷ್
ರಾಜಕೀಯ
ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಗೆ ತಕ್ಕ ಪಾಠ: ಬಿ ಎಲ್ ಸಂತೋಷ್
ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸದೆ ಎಂದು ಆರ್.ಎಸ್‌ಎಸ್ ಮುಖಂಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸದೆ ಎಂದು ಆರ್.ಎಸ್‌ಎಸ್ ಮುಖಂಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಮಲ ಪಕ್ಷ ಕರ್ನಾಟಕವನ್ನು ಕ್ಲೀನ್ ಸ್ವೀಪ್ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾದಂತಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದ್ದು, ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ