ನಿರೀಕ್ಷೆಯಂತೆಯೇ ಬಿಜೆಪಿ ಪರ ಫಲಿತಾಂಶ ಬಂದಿದೆ: ಡಿ.ವಿ.ಸದಾನಂದ ಗೌಡ

15 ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು.  ನಮ್ಮ ನಿರೀಕ್ಷೆಯಂತೆಯೇ ಇದೀಗ ಫಲಿತಾಂಶ ಬಂದಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ಹೇಳಿದ್ದಾರೆ. 
ಡಿ.ವಿ.ಸದಾನಂದ ಗೌಡ
ಡಿ.ವಿ.ಸದಾನಂದ ಗೌಡ
Updated on: 

ನವದೆಹಲಿ: 15 ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು.  ನಮ್ಮ ನಿರೀಕ್ಷೆಯಂತೆಯೇ ಇದೀಗ ಫಲಿತಾಂಶ ಬಂದಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ಹೇಳಿದ್ದಾರೆ. 

ಉಪಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಫಲಿತಾಂಶವನ್ನು ನಿರೀಕ್ಷಿಸಲಾಗಿತ್ತು. ಕರ್ನಾಟಕದ ಜನತೆಗೆ ಸ್ಥಿರ ಸರ್ಕಾರದ ಅಗತ್ಯವಿದೆ. ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಪ್ರಮುಖವಾಗಿದ್ದು, ಈ ಎರಡರಲ್ಲೂ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ. 

ಬಹು ನಿರೀಕ್ಷಿತ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, 15 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಒಟ್ಟು 12 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಜೆಡಿಎಸ್ ಖಾತೆಯನ್ನೇ ತೆರೆಯದೆ ಭಾರೀ ಮುಖಭಂಗವನ್ನು ಎದುರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com