ಅಸಹ್ಯ ಸರ್ಕಾರಕ್ಕೆ ಮತದಾರರ ಮುದ್ರೆ: ಕುಮಾರಸ್ವಾಮಿ ಬೇಸರ

ಉಪಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಇದೊಂದು ಅಸಹ್ಯ ಸರ್ಕಾರಕ್ಕೆ ಮುದ್ರೆ ಒತ್ತಿರುವ ಮತದಾರರಿಗೆ ಮನದಾಳದ...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಉಪಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಶಾಸಕಾಂಗ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಇದೊಂದು ಅಸಹ್ಯ ಸರ್ಕಾರಕ್ಕೆ ಮುದ್ರೆ ಒತ್ತಿರುವ ಮತದಾರರಿಗೆ ಮನದಾಳದ ಅಭಿನಂದನೆಗಳು ಎಂದು ಲೇವಡಿ ಮಾಡಿದ್ದಾರೆ.

ಇದೊಂದು  "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದರು. ಅವರ ಮಾತಿಗೆ  ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ'  ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದರು.

ಕುರುಡು ಕಾಂಚಾಣ ಕುಣಿಯುತಲಿತ್ತು. ಕಾಲಿಗೆ ಬಿದ್ದವರ ತುಳಿಯುತಲಿತ್ತು ಎಂದು ಹಾಡನ್ನು ಉಲ್ಲೇಖಿಸುವ ಮೂಲಕ ಮತದಾರರ‌ ಮೇಲಿನ ಬಿಜೆಪಿಯ ಹಣದ ಪ್ರಭಾವೇ ಗೆಲುವಿಗೆ ಕಾರಣ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಯಾರು ಸಹ್ಯ, ಯಾರು ಅಸಹ್ಯ ಎಂಬುದನ್ನು ಪ್ರಜ್ಞಾವಂತ ಮತದಾರರು ನಿರ್ಧರಿಸಿದ್ದಾರೆ ಎಂದು ಹೇಳುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಅಸಹ್ಯ ಸರ್ಕಾರಕ್ಕೆ ಮತದಾರರು ಬೆಂಬಲಿಸಿದ್ದಾರೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಕ್ಕೆ‌ ಟ್ವೀಟ್ ಮೂಲಕವೇ ಉತ್ತರ ನೀಡಿರುವ ಶ್ರೀರಾಮುಲು, ರಾಜಕೀಯ ಹೋರಾಟದಲ್ಲಿ ಸೋಲು, ಗೆಲುವು ಸಾಮಾನ್ಯ. ಸೋಲನ್ನು ಗೆಲುವಿನ ಮೆಟ್ಟಿಲಾಗಿ ಬಳಸಿಕೊಳ್ಳುವುದೇ ನಿಜವಾದ ರಾಜಕಾರಣಿಯ ಗುಣ. ಅದನ್ನು ಬಿಟ್ಟು ಜನರ ತೀರ್ಪಿನ ಬಗ್ಗೆ ವ್ಯಂಗ್ಯದ ಟೀಕೆಗಳು ವ್ಯಕ್ತಿಯ ಮನಸ್ಥಿತಿಯನ್ನು ಹೇಳುತ್ತದೆ. ಸೋಲನ್ನು ಒಪ್ಪಿಕೊಂಡು ಜನರನ್ನು ಗೌರವಿಸುವ ಗುಣ ಬರುವವರೆಗೆ ಗೆಲುವಿನ ರುಚಿ ನೋಡಲು ಸಾಧ್ಯವಿಲ್ಲ‌ ಎನ್ನುವ ಮೂಲಕ ಜೆಡಿಎಸ್‌ ನಾಯಕರಿಗೆ ತಕ್ಕ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com