ಮಂಡ್ಯದಲ್ಲಿ ಬಿಜೆಪಿ ಗೆಲುವು: ಡಿಸಿಎಂ ಅಶ್ವತ್ಥ ನಾರಾಯಣ ಪ್ರತಿಕ್ರಿಯೆ 

ರಾಜ್ಯ ರಾಜಕೀಯ ಚಿತ್ರಣವನ್ನು ಬದಲಿಸುವ ಮಹತ್ವದ ಚುನಾವಣೆ ಎಂದೇ ಪರಿಗಣಿಸಲ್ಪಟ್ಟಿದ್ದ ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಮನ್ನಣೆ ನೀಡಿದ್ದು, ಬಿಜೆಪಿ ಸರ್ಕಾರಕ್ಕೆ ಸ್ಥಿರತೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ
Updated on: 

ಕೆ.ಆರ್.ಪೇಟೆ:  ರಾಜ್ಯ ರಾಜಕೀಯ ಚಿತ್ರಣವನ್ನು ಬದಲಿಸುವ ಮಹತ್ವದ ಚುನಾವಣೆ ಎಂದೇ ಪರಿಗಣಿಸಲ್ಪಟ್ಟಿದ್ದ ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಮನ್ನಣೆ ನೀಡಿದ್ದು, ಬಿಜೆಪಿ ಸರ್ಕಾರಕ್ಕೆ ಸ್ಥಿರತೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮಹತ್ವದ ಬೆಳವಣಿಗೆಯಾಗಿದ್ದು, ಇದರಿಂದ ಮಂಡ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಮತದಾರರು ಅಭಿವೃದ್ಧಿಗೆ ಮಾನ್ಯತೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಮೂರುವರೆ ವರ್ಷಗಳ ಕಾಲ ಸುಗಮವಾಗಿ ಸ್ಥಿರ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com