ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಶಿವರಾಂ ಹೆಬ್ಬಾರ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ತಮಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯಲ್ಲಾಪುರದ ನೂತನ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರು ಗುರುವಾರ ಹೇಳಿದ್ದಾರೆ.
ಶಾಸಕ ಶಿವರಾಮ್ ಹೆಬ್ಬಾರ್
ಶಾಸಕ ಶಿವರಾಮ್ ಹೆಬ್ಬಾರ್
Updated on: 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ತಮಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಯಲ್ಲಾಪುರದ ನೂತನ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರು ಗುರುವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ. ತಮಗೆ ಯಾವ ಖಾತೆ ಕೊಡುತ್ತಾರೋ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಮೇಲಿದ್ದ ಜನರ ನಂಬಿಕೆ, ನಾನು ಮಾಡಿದ್ದ ಅಭಿವೃದ್ಧಿ ಕೆಲಸ ನನ್ನ ಕೈಹಿಡಿದಿದೆ. ನಾವು ಕಾಂಗ್ರೆಸ್ ನಿಂದ ಹೊರ ಬಂದಿದ್ದರೂ ತಮ್ಮನ್ನು ಭಾರೀ ಮತಗಳ ಅಂತರದಿಂದ ಕ್ಷೇತ್ರದ ಮತದಾರರು ಗೆಲ್ಲಿಸಿದ್ದಾರೆ. ಬೇರೆ ಯಾವುದರ ಬಗ್ಗೆಯೂ ನಾನು ಮಾತನಾಡುವುದಿಲ್ಲ. ತಮ್ಮನ್ನು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸೋಲಿಸುವ ಪ್ರಯತ್ನ ಮಾಡಿದ್ದು ಗೊತ್ತಿಲ್ಲ. ಕಾಂಗ್ರೆಸ್ ತೊರೆದ ಬಳಿಕ ಆ ಪಕ್ಷದ ಎಲ್ಲವೂ ಮುಗಿದ ಕಥೆ ಎಂದರು.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಮಂತ್ರಿಮಂಡಲ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರವಾಗಿದ್ದು, ಈ ಬಗ್ಗೆ ಅವರನ್ನೇ ಕೇಳುವುದು ಸೂಕ್ತ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com