ಜನಾರ್ದನ ರೆಡ್ಡಿ ಸಕ್ರಿಯ ರಾಜಕಾರಣದಲ್ಲಿ ಇದ್ದಿದ್ದರೇ ಶ್ರೀರಾಮುಲುಗೆ ಮತ್ತಷ್ಟು ಬಲ ಬರುತ್ತಿತ್ತು!

ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ಶ್ರೀರಾಮುಲು ಮತ್ತು ಜನಾರ್ದನ ರ್ಡ್ಡೆ
ಶ್ರೀರಾಮುಲು ಮತ್ತು ಜನಾರ್ದನ ರ್ಡ್ಡೆ

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಇಂದು ಜನಾರ್ದನ ರೆಡ್ಡಿ ನಮ್ಮ ಜೊತೆಯಲ್ಲಿದಿದ್ದರೆ ನಮಗೆ ಯಾವ ಹಿನ್ನಡೆ ಆಗುತ್ತಿರಲಿಲ್ಲ  ಎಂದು ಹೇಳಿದ್ದಾರೆ.

ವಾಲ್ಮೀಕಿ ಸಮುದಾಯದ ಪ್ರಬಲ ನಾಯಕರಾಗಿ ಉನ್ನತ ಮಟ್ಟದಲ್ಲಿ ಶ್ರೀರಾಮುಲು ಬೆಳೆದಿದ್ದಾರೆ. ಕಾಲ ಚಕ್ರ ಹೀಗೆ ಇರಲ್ಲ, ಬದಲಾಗುತ್ತಿರುತ್ತದೆ. ಕೆಳಗೆ ಇದ್ದೋರು ಮೇಲೆ ಬರಬೇಕು.

‘ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎನ್ನುವುದು ಈ ಭಾಗದ ಜನರ ಬೇಡಿಕೆಯಾಗಿದೆ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಅವರು. ಉನ್ನತ ಮಟ್ಟದಲ್ಲಿ ಬೆಳೆದಿದ್ದಾರೆ. ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com