ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪಕ್ಷ ತೊರೆಯುವವರನ್ನು ಉದ್ದೇಶಿಸಿ ತೀಕ್ಷ್ಣವಾಗಿ ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪಕ್ಷ ತೊರೆಯುವವರನ್ನು ಉದ್ದೇಶಿಸಿ ತೀಕ್ಷ್ಣವಾಗಿ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ಸೋಲು ಆಗಿದೆ ಎಂದ ಮಾತ್ರಕ್ಕೆ ಜೆಡಿಎಸ್ ಪಕ್ಷವೇ ಮುಳಿಗಿ ಹೋಗಲಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ. 

ಪಕ್ಷದ ಮುಖಂಡ ಮಧು ಬಂಗಾರಪ್ಪ ಪಕ್ಷ ತೊರೆಯಲು ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಧು ಬಂಗಾರಪ್ಪ ಅವರ ಮನೆಯಲ್ಲಿ ಸಮಸ್ಯೆಯಿದೆ. ಆದರೆ, ಅವರು ಕಾಂಗ್ರೆಸ್ ಸೇರುವುದು ಗೊತ್ತಿಲ್ಲ. ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ನನಗೆ ಅದನ್ನು ಕಟ್ಟಿಕೊಂಡು ಏನು ಆಗಬೇಕು? ಜೆಡಿಎಸ್ ಬಿಟ್ಟು ಹೋಗುವವರನ್ನು ಹಿಡಿದಿಟ್ಟುಕೊಂಡು ಇರುವುದಕ್ಕೆ ಆಗುವುದಿಲ್ಲ. ಆದರೂ ಮುಖಂಡರು ಹಾಗೂ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮಾತ್ರವಲ್ಲ. ಈ ಹಿಂದೆ ಕಾಂಗ್ರೆಸ್ ಕೂಡ ಸೋತಿದೆ. ಒಂದು ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಮಾತ್ರಕ್ಕೆ ಮುಂದೆಯೂ ಜಯ ಗಳಿಸುತ್ತಾರೆನ್ನುವುದಕ್ಕೆ ಸಾಧ್ಯವಿಲ್ಲ. ಬಿಜೆಪಿ ಈಗ ಅರಳಿದೆ. ಮುಂದೆ ಹಾಗೆಯೇ ಮುದುಡಿ ಹೋಗಲಿದ ಎಂದು ತೀಕ್ಷ್ಣವಾಗಿ ತಿಳಿಸಿದರು. 

ರಾಜೀವ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪ್ರಧಾನಿ ಮೋದಿ ಗೆದ್ದಿಲ್ಲ. ಆದರೆ, ಏನಾಯಿತು ನೋಡಿ. ನಮ್ಮ ಪಕ್ಷ ಯಾವುದೇ ಶಾಸಕರನ್ನೂ ಖರೀದಿಸಲು ಮುಂದಾಗುವುದಿಲ್ಲ. ಬಿಜೆಪಿ ಸರ್ಕಾರವನ್ನು ಉರುಳಿಸುವ ಆಸಕ್ತಿ ನಮಗಿಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com