13 ಶಾಸಕರಿಂದ ಪ್ರಮಾಣ ವಚನ, ಕಾರ್ಯಕ್ರಮದಿಂದ ದೂರ ಉಳಿದ ಕಾಂಗ್ರೆಸ್ ಶಾಸಕರು

ಉಪ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಉಪ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಉಪ‌ ಚುನಾವಣೆ ಯಲ್ಲಿ ಗೆದ್ದ 15 ಅಭ್ಯರ್ಥಿಗಳ ಶಾಸಕರಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಸರ್ಕಾರದ ಪ್ರಮುಖ ಸಚಿವರುಗಳು ಭಾಗಿಯಾಗಲಿದ್ದಾರೆ. 

ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿ, ಬಿ.ಸಿ.ಪಾಟೀಲ್, ನಾರಾಯಣಗೌಡ, ಶಿವರಾಂ ಹೆಬ್ಬಾರ್, ಆನಂದ್ ಸಿಂಗ್, ಸುಧಾಕರ್, ಎಸ್‌.ಟಿ.ಸೋಮಶೇಖರ್, ಬೈರತಿ ಬಸವರಾಜು, ಕೆ.ಗೋಪಾಲಯ್ಯ, ರಾಣೆಬೆನ್ನೂರು ಶಾಸಕ ಅರುಣ್ ಕುಮಾರ್ ಮತ್ತು ಹೊಸಕೋಟೆಯ ಬಿಜೆಪಿ ಬಂಡಾಯ ಅಭ್ಯರ್ಥಿ ಆಗಿ ಗೆಲುವು ಕಂಡ ಶರತ್ ಬಚ್ಚೇಗೌಡ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಉಪ‌ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 12 ಬಿಜೆಪಿ ಹಾಗೂ ಓರ್ವ ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಶಾಸಕರು ಪ್ರಮಾಣ ವಚನವನ್ನು ಮತ್ತೊಂದು ದಿನ ಪಡೆಯುವುದಾಗಿ ಸ್ಪೀಕರ್ ಕಾಗೇರಿಗೆ ತಿಳಿಸಿರುವ ಕಾರಣ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು ಮತ್ತೊಂದು ದಿನ ಇಟ್ಟುಕೊಳ್ಳಲು ನಿರ್ಣಯಿಸಲಾಗಿದೆ. 

ಕಾರ್ಯಕ್ರಮದಿಂದ ದೂರ ಉಳಿದ ಕಾಂಗ್ರೆಸ್ ಶಾಸಕರು
ಇನ್ನು ಇಂದಿನ ಪ್ರಮಾಣ ವಚನ ಕಾರ್ಯಕ್ರಮದಿಂದ ವಿಪಕ್ಷ ಕಾಂಗ್ರೆಸ್ ನಾಯಕರು ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com