'ಅಪ್ಪ-ಮಗನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗದ ಎಚ್‌ಡಿಕೆಗೆ ಇನ್ನೂ ಬುದ್ಧಿ ಬಂದಿಲ್ಲ' 

ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು  ಹಾಗೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಲು ಸಾಧ್ಯವಾಗದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಅಡ್ರೆಸ್ ಹುಡುಕಬೇಕಾಗುತ್ತದೆ ಎಂದು..
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು  ಹಾಗೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಲು ಸಾಧ್ಯವಾಗದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಅಡ್ರೆಸ್ ಹುಡುಕಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್‌ ಈಶ್ವರಪ್ಪ ಕಿಡಿಕಾರಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕುಮಾರಸ್ವಾಮಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬ್ರಿಟಿಷರು ಹಿಂದೂಸ್ತಾನ - ಪಾಕಿಸ್ತಾನ ಎಂದು ದೇಶವನ್ನು ಛಿದ್ರ ಮಾಡಿದರೆ, ಕಾಂಗ್ರೆಸ್ ನವರು ಹಿಂದೂ ಮುಸ್ಲಿಮರವನ್ನು ಸಂಪೂರ್ಣ ದೂರ ಮಾಡಿ, ಮತ್ತೆ ಅಧಿಕಾರಕ್ಕೆ ಬರಲು ಯತ್ನ ಮಾಡುತ್ತಿದ್ದಾರೆ.

ಸಬ್ ಕಾ ಸಾಥ್ ಸಬ್ ಕ ವಿಕಾಸ್ ಜೊತೆಗೆ ಸಬ್ ಕಾ ವಿಶ್ವಾಸ್ ಸಹ ಬಿಜೆಪಿಯ ಧ್ಯೇಯವಾಗಿದೆ. ದೊಂಬಿ ರಾಜಕೀಯ ಕುತಂತ್ರಕ್ಕೆ ಕಾಂಗ್ರೆಸ್ ನವರು ಯತ್ನಿಸುತ್ತಿದ್ದು, ತಾತ್ಕಾಲಿಕ ಗಲಭೆ ಎಬ್ಬಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬುಖಾರಿಯವರು ಪೌರತ್ವ ಕಾಯಿದೆಯಿಂದ ಯಾವುದೇ ಮುಸ್ಲಿಮರಿಗೆ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com