ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ,ಕ್ರೂರಿ, ಕೋಮುವಾದಿ ಆಗಬಾರದು- ಸಿದ್ದರಾಮಯ್ಯ

ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು.  ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ

ಬೆಂಗಳೂರು: ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು.  ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಮಂಗಳೂರು  ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ. ಮಂಗಳೂರು ಗಲಭೆಗೆ ಗುಂಡೇಟಿನಿಂದ  ಸತ್ತವರೇ ಕಾರಣ ಎಂದು ತೀರ್ಪು ನೀಡಿರುವ ಮುಖ್ಯಮಂತ್ರಿಗಳೇ, ಸಿಐಡಿ ತನಿಖೆಯ ನಾಟಕ  ಯಾಕೆ? ಅದನ್ನು ನಿಲ್ಲಿಸಿಬಿಡಿ. ಈಗ ಖಾತ್ರಿಯಾಗಿದೆ, ಹೆಣ ಬೀಳಿಸಲು ಪೊಲೀಸರಿಗೆ ಆದೇಶ  ನೀಡಿದವರು ನೀವೇ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಗೋಲಿಬಾರ್‌ನಲ್ಲಿ ಹಸುನೀಗಿದ ಅಬ್ದುಲ್ ಜಲೀಲ್ ಮತ್ತು ನೌಶೀನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡು ದಿನಗಳ ಹಿಂದೆ 10 ಲಕ್ಷ ರೂ.ಪರಿಹಾರ ಘೋಷಿಸಿದ್ದರು. ಆದರೆ ಇಂದು ಮಂಗಳೂರಿನಲ್ಲಿ ಸಂತ್ರಸ್ತ ಕುಟುಂಬಕ್ಕೆ ಇನ್ನೂ ಪರಿಹಾರ ಘೊಷಿಸಿಲ್ಲ. ಆರೋಪಿಗಳ ಹೆಸರು ಮಂಗಳೂರು ಹಿಂಸಾಚಾರ ಪ್ರಕರಣದ ಎಫ್ಐಆರ್‌ನಲ್ಲಿ ಇರುವುದರಿಂದ ಈಗ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com