ಮಂಗಳೂರು ಹಿಂಸಾಚಾರಕ್ಕೆ ಸಿದ್ದರಾಮಯ್ಯ, ಹೆಚ್'ಡಿಕೆ ಕಾರಣ: ಶೋಭಾ ಕರಂದ್ಲಾಜೆ

ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾಚಾರಕ್ಕೆ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆಯವರು ಹೇಳಿದ್ದಾರೆ. 
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Updated on

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾಚಾರಕ್ಕೆ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರೇ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆಯವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರು ಸುಖಾಸುಮ್ಮನೆ ರಾಜ್ಯ ಸರ್ಕಾರವನ್ನು ದೂಷಿಸುತ್ತಿವೆ. ಇಬ್ಬರೂ ಮಾಜಿ ಸಿಎಂಗಳು ತಮ್ಮ ಅವಧಿಯಲ್ಲಿ ಪಿಎಫ್ಐ ಹಾಗೂ ಕೆಎಫ್'ಡಿ ಸಂಘಟನೆಗಳನ್ನು ಪೋಷಿಸಿದ್ದೇ ಹಿಂಸಾಚಾರಕ್ಕೆ ಕಾರಣ. ಪಿಎಫ್ಐಗೆ ಸೇರಿದ ಕ್ರಿಮಿನಲ್ ಗಳ ವಿರುದ್ಧ ಅಂದಿನ ಕಾಂಗ್ರೆಸ್ ಸರ್ಕಾರ 1,600 ಪ್ರಕರಣಗಳನ್ನು ಹಿಂಪಡೆದು, ಜೈಲಿನಿಂದ ಬಿಡುಗಡೆ ಮಾಡಿತ್ತು ಎಂದು ಹೇಳಿದ್ದಾರೆ. 

ಮೈಸೂರಿನಲ್ಲಿ ಗಲಭೆ ಸೃಷ್ಟಿಯಾದಾಗ ಪೊಲೀಸರು 45 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಆದರೆ, ಸಿದ್ದರಾಮಯ್ಯ ಅವರು ಆ ಪ್ರಕರಣಗಳನ್ನು ಕೈಬಿಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು ಇನ್ನು ಶಾಸಕ ಯುಟಿ ಖಾದರ್ ಕೂಡ ಸೂಕ್ಷ್ಮವಲ್ಲದ ರೀತಿಯಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಂಗಳೂರಿನಲ್ಲಿ ಹಿಂಸಾಚಾರ ಸೃಷ್ಟಿಸಿದ್ದವರು ತಮ್ಮ ಮುಖಗಳನ್ನು ಮುಚ್ಚಿಕೊಂಡಿರುವುದು ಕಂಡು ಬಂದಿದೆ. ಇನ್ನು ಕೆಲವರು ಸಿದ್ದರಾಮಯ್ಯ ಅವರ ಬೆಂಬಲ ಹಿನ್ನೆಲೆಯಲ್ಲಿ ನೇರವಾಗಿ ಹಿಂಸಾಚಾರ ಸೃಷ್ಟಿಸಿದ್ದರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com