ರಾಹುಲ್, ಸೋನಿಯಾ ಬೆನ್ನು ತಟ್ಟಬಹುದು, ಜನತೆ ಕ್ಷಮಿಸುವರೇ: 'ಡಿಕೆಶಿ' ಕುಟುಕಿದ ಸಿಎಂ ಪುತ್ರ!

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕ್ರಿಸ್ಮಸ್ ದಿನದಂದು ಏಸುವಿನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದಂದಿನಿಂದಲೂ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರ ಖಂಡನೆ ನಿರಂತರವಾಗಿ ಮುಂದುವರಿದಿದೆ.
ಸೋನಿಯಾ ಮತ್ತು ರಾಹುಲ್
ಸೋನಿಯಾ ಮತ್ತು ರಾಹುಲ್
Updated on

ಬೆಂಗಳೂರು:  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕ್ರಿಸ್ಮಸ್ ದಿನದಂದು ಏಸುವಿನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದಂದಿನಿಂದಲೂ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರ ಖಂಡನೆ ನಿರಂತರವಾಗಿ ಮುಂದುವರಿದಿದೆ.

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇಂದು ಟ್ವೀಟ್ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಕುಟುಕಿದ್ದಾರೆ.

ಡಿ.ಕೆ ಶಿವಕುಮಾರ್​ ಅವರೇ, ಕೆಪಿಸಿಸಿ ಅಧ್ಯಕ್ಷ ಪಟ್ಟದಲ್ಲಿ ಕುಳಿತುಕೊಳ್ಳಲು ಈ ಪರಿಯಲ್ಲಿ ನಿಮ್ಮ ಹೈಕಮಾಂಡ್​ನ್ನ ಓಲೈಸಬೇಕೇ? ಕೆಂಪೇಗೌಡರ ನೆಲದ ಹೆಗ್ಗಳಿಕೆಯ ಇತಿಹಾಸದ ಮೇಲೆ ಅಟ್ಟಹಾಸ ಮೆರೆದು, ಕನ್ನಡನಾಡಿನ ವೈಭವದ ಸಂಸ್ಕೃತಿಗೆ ಧಕ್ಕೆ ತರುವ ಐತಿಹಾಸಿಕ ಪ್ರಮಾದ ಮಾಡುತ್ತಿದ್ದೀರಿ. ಇದಕ್ಕೆ ರಾಹುಲ್, ಸೋನಿಯಾ ಬೆನ್ನು ತಟ್ಟಬಹುದು, ಜನತೆ ಕ್ಷಮಿಸುವರೇ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್​ನ ಓಲೈಕೆ ಅಸ್ತ್ರವಾಗಿ ಏಸುವನ್ನು ಬಳಸಿಕೊಳ್ಳುತ್ತಿರುವ ನಿಮ್ಮ ನಡೆ, ನಾಡಿನ ಸಂಸ್ಕೃತಿ, ಇತಿಹಾಸಕ್ಕೆ ಬಗೆಯುತ್ತಿರುವ ಐತಿಹಾಸಿಕ ಅಪಚಾರವಾಗಿದೆ. ಸ್ಥಳ ಮಹಿಮೆಯ ಹಿನ್ನೆಲೆಯಲ್ಲಿ ಪ್ರತಿಮೆ, ಸ್ಮಾರಕಗಳ ನಿರ್ಮಾಣವಾಗುತ್ತದೆ. ಏಷ್ಯಾದಲ್ಲೇ ಎತ್ತರದ ಏಸು ಪ್ರತಿಮೆ ನಿರ್ಮಾಣದ ಸ್ಥಳ ಮಹಿಮೆ ಹಿನ್ನೆಲೆ ಏನು? ಎಂದು ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com