ಬಿಜೆಪಿ, ಆರ್'ಎಸ್ಎಸ್ ನಾಯಕರ ಆಸ್ತಿಯನ್ನು ಜಪ್ತಿ ಮಾಡ್ತೀರಾ?: ಸಿದ್ದರಾಮಯ್ಯ

ರಾಜ್ಯದಲ್ಲಿ ಈವರೆಗೂ ಗಲಭೆಗಳನ್ನು ಸೃಷ್ಟಿಸಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಗಲಭೆಗಳನ್ನು ಸೃಷ್ಟಿಸಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಚಿವ ಅಶೋಕ್ ಅವರು ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲೂ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದಿದ್ದಾರೆ. ಕರ್ನಾಟಕದಲ್ಲಿ ಈ ವರೆಗೂ ಗಲಭೆಗಳಿಗೆ ಕಾರಣವಾಗಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಮೇಲೂ ಇದೀ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. 

ಸಾರ್ವಜನಿಕ ಆಸ್ತಿಗೆ ನಷ್ಟ ಉಂಟುಮಾಡಿರುವ ಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ ಹಿಂದಿನ ಗಲಭೆಗಳಲ್ಲಿ ಆರೋಪಿಗಳಾಗಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com