ಅಣ್ಣಾ, ಕುಮಾರಣ್ಣ, ಕಂಪ್ಲಿ ಶಾಸಕ ಗಣೇಶ್ ಬಂಧಿಸಿ, ನಿಮ್ಮ ಪೌರುಷ ತೋರಿಸಿ: ಸಿಎಂಗೆ ಬಿಜೆಪಿ ಸವಾಲು

ಭೂಗತ ಪಾತಕಿ ರವಿ ಪೂಜಾರಿ ಬಂಧನದ ಯಶಸ್ಸು ಸಮ್ಮಿಶ್ರ ಸರ್ಕಾರಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೆ ರಾಜ್ಯ ಬಿಜೆಪಿ ಸಿಎಂ ಗೆ ಟಾಂಗ್ ನೀಡಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬಂಧನದ ಯಶಸ್ಸು ಸಮ್ಮಿಶ್ರ ಸರ್ಕಾರಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೆ ರಾಜ್ಯ ಬಿಜೆಪಿ ಸಿಎಂ ಗೆ ಟಾಂಗ್ ನೀಡಿದೆ.
ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ ಎಂದು  ಸವಾಲು ಹಾಕಿದೆ,
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ನೇರವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದೆ, ಸಮ್ಮಿಶ್ರ ಸರ್ಕಾರ ರಚನೆ ಆದ ಆರಂಭದಲ್ಲೇ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಹಾಗೂ ಭಾರತದ ವಿದೇಶಾಂಗ ಇಲಾಖೆ ಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ರವಿ ಪೂಜಾರಿ ಬಂಧನ ಸಮ್ಮಿಶ್ರ ಸರ್ಕಾರದ ಯಶಸ್ಸು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com