ಒಂದೇ ವೇದಿಕೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಕುತೂಹಲ ಕೆರಳಿಸಿದ ಸಿದ್ದು-ಕೃಷ್ಣ ಭೇಟಿ!

ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಬಾಕಿ ಇರುವಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕ ಎಸ್ಎಂ ಕೃಷ್ಣ ಅವರು...
ಎಸ್ಎಂ ಕೃಷ್ಣ-ಸಿದ್ದರಾಮಯ್ಯ
ಎಸ್ಎಂ ಕೃಷ್ಣ-ಸಿದ್ದರಾಮಯ್ಯ
Updated on: 
ಕೋಲಾರ: ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಬಾಕಿ ಇರುವಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕ ಎಸ್ಎಂ ಕೃಷ್ಣ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. 
ಕ್ಷೀರ ಕ್ರಾಂತಿಯ ಹರಿಕಾರ ಎಂವಿ ಕೃಷ್ಣಪ್ಪನವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ಪಕ್ಷಾತೀತ ದಿಗ್ಗಜ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. 
ಕೋಲಾರಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಸ್ಎಂ ಕೃಷ್ಣ ಅವರು ಕೋಲಾರದ ಪ್ರವಾಸಿ ಮಂದಿರದಲ್ಲಿ ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com