ಲೋಕಸಮರಕ್ಕೆ ಕಾಂಗ್ರೆಸ್ ಸಜ್ಜು: ಸೋಮವಾರ ಹಿರಿಯ ನಾಯಕರ ಸಭೆ

ಲೋಕಸಭೆ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿವೆ, ಹೀಗಾಗಿ ಕಾಂಗ್ರೆಸ್ ಯುದ್ಧಕ್ಕೆ ಸನ್ನದ್ದವಾಗಿ ನಿಂತಿದೆ, ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿವೆ, ಹೀಗಾಗಿ ಕಾಂಗ್ರೆಸ್ ಯುದ್ಧಕ್ಕೆ ಸನ್ನದ್ದವಾಗಿ ನಿಂತಿದೆ, ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಲೋಕ ಸಮರಕ್ಕೆ ಸಿದ್ದರಾಗುತ್ತಿದ್ದಾರೆ. 
ಲೋಕ ಸಮರಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ಸಭೆ ಏರ್ಪಡಿಸಲಾಗಿದೆ, ಸಭೆಯಲ್ಲಿ  ಕಣಕ್ಕಿಳಿಯುವ ಅಭ್ಯರ್ಥಿಗಳು ಹಾಗೂ 28 ಕ್ಷೇತ್ರಗಳಲ್ಲಿ  ಮಾಡಬೇಕಾದ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಲಾಗುತ್ತದೆ.
ಚುನಾವಣಾ ಸಮಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್,  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,  ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಿ,ಕೆ ಹರಿಪ್ರಸಾದ್ ಸೇರಿದಂತೆ ಹಲವು ಮಂದಿಯಿದ್ದಾರೆ.
ಪ್ರತಿ ಕ್ಷೇತ್ರವಾರು ನಾವು ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿದ್ದೇವೆ, ಸೀಟು ಹಂಚಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ. ಗುಲ್ಬರ್ಗಾದಿಂದ ಮಲ್ಲಿಕಾರ್ಜುನ ಖರ್ಗೆ, ಚಿಕ್ಕಬಳ್ಳಾಪುರದಿಂದ ವೀರಪ್ಪ ಮೊಯ್ಲಿ,  ಕೋಲಾರದಿಂದ ಕೆ.ಎಚ್ ಮುನಿಯಪ್ಪ, ಸ್ಪರ್ಧಿಸಲಿದ್ದಾರೆ, ಇನ್ನೂ ಉಳಿದ 25 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗುವುದು, ಬೆಂಗಳೂರು ಸೆಂಟ್ರಲ್ ನಲ್ಲಿ ಕಾಂಗ್ರೆಸ್ ಗೆಲ್ಲುವ ಸಾದ್ಯತೆ ಹೆಚ್ಚಿದೆ, ಈ ಕ್ಷೇತ್ರಕ್ಕೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ.
ಸಾಮಾಜಿಕ ನ್ಯಾಯ ಒದಗಿಸುವುದು, ಗೆಲ್ಲುವ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದು, ನಮ್ಮ ಪ್ರಮುಖ ಉದ್ದೇಶವಾಗಿದೆ, ಜೊತೆಗೆ ಎಲ್ಲಾ ಸಮುದಾಯಗಳ ನಾಯಕರಿಗೂ ಸ್ಪರ್ದಿಸಲು ಅವಕಾಶ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಸೋಮವಾರ ನಡೆಯುವ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಭಾಗವಹಿಸಲಿದ್ದಾರೆ, ಕೇಂದ್ರ ಚುನಾವಣಾ ಸಮಿತಿ ಸಭೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com