ಸುಮಲತಾ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುವ ಕುರಿತು ಚರ್ಚಿಸಿದ್ದಾರೆ. ಸುಮಲತಾ ಅವರು ನಾಳೆ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದು, ಅದನ್ನು ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.